ರಾಜ್ಯ

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು

Lingaraj Badiger

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರಿಗೆ ಮಂಗಳವಾರ ರಾತ್ರಿ ಲಘು ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರಿಗೆ ಇಂದು ರಾತ್ರಿ 10 ಗಂಟೆಯ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

SCROLL FOR NEXT