5ನೇ ಆರೋಪಿ ಗಂಗಾಧರಯ್ಯ ಬಂಧನ 
ರಾಜ್ಯ

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ

ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ 5ನೇ ಪ್ರಮುಖ ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ್ದು, ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.

ಪ್ರಕರಣದ 3ನೇ ಆರೋಪಿಯಾಗಿರುವ ಮಠದ ಉತ್ತರಾಧಿಕಾರಿ ಮತ್ತು 4ನೇ ಆರೋಪಿ ಪರಮಶಿವಯ್ಯ ಮತ್ತು 3ನೇ ಆರೋಪಿ ಬಸವಾಧಿತ್ಯ ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ. ಅವರ ಬಂಧನಕ್ಕಾಗಿ ಹುಡುಕಾಟ ಮುಂದುವರಿದಿದೆ. 

ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಯನ್ನು ವಿಚಾರಣೆಗಾಗಿ ತಮ್ಮ 7 ದಿನ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಕೇಳಿದ್ದಾರೆ. ಸದ್ಯ ಈಕೆ ಶಿವಮೊಗ್ಗ ಕಾರಾಗೃಹದಲ್ಲಿ ನ್ಯಾಯಾಂಗ‌ ಬಂಧನದಲ್ಲಿದ್ದಾರೆ. ಇಂದು ಈ ಸಂಬಂಧ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಿಂದ ಪೊಲೀಸರಿಗೆ ಸೂಚನೆ ಸಿಗುವ ಸಾಧ್ಯತೆಯಿದೆ. ಡಿವೈಎಸ್​ ಅನಿಲ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ