ರಾಜ್ಯ

ಉತ್ತರ ಕರ್ನಾಟಕದ ಪ್ರಮುಖ ದೇವಸ್ಥಾನಗಳಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ

Lingaraj Badiger

ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ದೇವಸ್ಥಾನಗಳು ಹಾಗೂ ರಾಜ್ಯದಿಂದ ಹೆಚ್ಚು ಭಕ್ತರನ್ನ ಹೊಂದಿರುವ ದೇವಾಲಯಗಳಿಗೆ ಮುಜರಾಯಿ ಇಲಾಖೆಯ ವತಿಯಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅವರು ಮಂಗಳವಾರ ತಿಳಿಸಿದ್ದಾರೆ.

2021ರ ಡಿಸೆಂಬರ್‌ ನಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ತಗೆದುಕೊಂಡ ನಿರ್ಧಾರದಂತೆ ಈ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

ಪ್ರಮುಖ ದೇವಸ್ಥಾನಗಳಾದ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನ, ಕಲಬುರ್ಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯಸ್ವಾಮಿ ದೇವಾಲಯ, ಉತ್ತರ ಕರ್ನಾಟಕ ಭಾಗದ ಅತಿಹೆಚ್ಚು ಭಕ್ತರನ್ನು ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ ಮತ್ತು ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಲಾ 3 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೇವೆ ಎಂದು ಜೊಲ್ಲೆ ತಿಳಿಸಿದ್ದಾರೆ.

ಈ ಅನುದಾನವನ್ನು ಬಳಸಿಕೊಂಡು ದೇವಸ್ಥಾನಗಳನ್ನು ಅಭಿವೃದ್ದಿಗೊಳಿಸಲು ಅಧಿಕಾರಿಗಳಿಗೆ ಹಾಗೂ ದೇವಸ್ಥಾನಗಳ ವ್ಯವಸ್ಥಾಪನ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

SCROLL FOR NEXT