ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 262 ಸೇರಿ ರಾಜ್ಯದಲ್ಲಿ 491 ಮಂದಿಗೆ ಪಾಸಿಟಿವ್; ಮೂವರು ಸಾವು

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 491 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,56,919ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,214ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 262 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,67,742ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 884 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,12,333ಕ್ಕೆ ಏರಿಕೆಯಾಗಿದೆ. ಇನ್ನು 4,330 ಸಕ್ರಿಯ ಪ್ರಕರಣಗಳಿವೆ.

SCROLL FOR NEXT