ಖೋಟಾ ನೋಟು ತಯಾರಕರ ಸೆರೆ 
ರಾಜ್ಯ

ಬೆಂಗಳೂರು: ಖೋಟಾ ನೋಟು ತಯಾರಿಕಾ ಜಾಲ ಪತ್ತೆ, ಇಬ್ಬರು ಸೆರೆ

ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪ್ರದೀಪ್ ಅಲಿಯಾಸ್ ಉನ್ನಿ ಮತ್ತು ಸನಲ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 3.16 ಲಕ್ಷ ರೂ ಮೌಲ್ಯದ 500 ಮತ್ತು 2 ಸಾವಿರ ರೂ ಮುಖ ಬೆಲೆಯ ಖೋಟಾ ನೋಟುಗಳು ಮತ್ತು 46 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಬಸವನಪುರ ವಿಲೇಜ್‌ನಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಜೆಪಿ ಠಾಣೆ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶಾಂತಿ ಎಂಬವರು ಮನೆಯ ಕಿಟಕಿ ಪಕ್ಕದ ಟೇಬಲ್ ಮೇಲಿಟ್ಟಿದ್ದ ಚಿನ್ನದ ಸರ ಕಳವು ಮಾಡಲಾಗಿತ್ತು. ಅಲ್ಲದೇ, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ದೋಚಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಘಟನಾ ಸ್ಥಳದ ಸಿಸಿ ಕ್ಯಾಮರಾ ಮತ್ತು ನಿಖರ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಖೋಟಾ ನೋಟು ಪತ್ತೆ
ಬಂಧಿತರ ವಿಚಾರಣೆ ವೇಳೆ ಛಾಪಾ ಕಾಗದ (ಬಾಂಡ್ ಪೇಪರ್)ಗಳ ಮೇಲೆ 500 ಮತ್ತು 2 ಸಾವಿರ ಮುಖ ಬೆಲೆಯ ನೋಟುಗಳನ್ನು ಕಲರ್ ಜೆರಾಕ್ಸ್ ಮೂಲಕ ಮುದ್ರಿಸಿ ಅಸಲಿ ನೋಟುಗಳು ಎಂದು ಬದಲಾವಣೆ ಮಾಡುತ್ತಿದ್ದರು ಎಂಬುದೂ ಗೊತ್ತಾಗಿದೆ. ಲಕ್ಷಾಂತರ ರೂ.ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಆರೋಪಿಗಳು ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ಸರ ಕಳವು ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳವು ಮಾಡಿದ್ದ ಚಿನ್ನಾಭರಣಗಳನ್ನು ಕರಗಸಿ ಚಿನ್ನದ ಗಟ್ಟಿಗಳನ್ನಾಗಿ ಮಾಡಿ, ಬಂಗಾರದ ಅಂಗಡಿಗಳು ಮತ್ತು ಫೈನಾನ್ಸ್ ಕಂಪನಿಗಳಲ್ಲಿ ಅಡಮಾನ ಇಟ್ಟು ಮೋಜಿನ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT