ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 198 ಸೇರಿ ರಾಜ್ಯದಲ್ಲಿ 379 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 379 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,58,557ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 379 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,58,557ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,217ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 198 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,68,576ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 486 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,14,027ಕ್ಕೆ ಏರಿಕೆಯಾಗಿದೆ. ಇನ್ನು 4,271 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ