ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾಗೆ ಇಂದು ಐವರು ಬಲಿ; ಬೆಂಗಳೂರಿನಲ್ಲಿ 218 ಸೇರಿ ರಾಜ್ಯದಲ್ಲಿ 317 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ317 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,58,874ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ317 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,58,874ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40222ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 218 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1868794ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 638 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4014665ಕ್ಕೆ ಏರಿಕೆಯಾಗಿದೆ. ಇನ್ನು 3945 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!