ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ರೂ. ಲಂಚದ ಹಣ ವಶ
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶ್ಚಿಮ ವಲಯ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪಶ್ಚಿಮ ವಲಯ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರಿ ನೀಡಿದ ನಂತರ ನಡೆದ ಮೊದಲ ದಾಳಿ ಇದಾಗಿದ್ದು, ಇಂದು ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಲೋಕಾಯುಕ್ತ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿ ವೇಳೆ 4 ಲಕ್ಷ ರೂಪಾಯಿ ಲಂಚದ ಹಣವನ್ನೂ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.
ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು. ಈ ದೂರಿನ ಅನ್ವಯವೇ ದಾಳಿ ನಡೆಸಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.