ಸಂಗ್ರಹ ಚಿತ್ರ 
ರಾಜ್ಯ

ರಾಮನಗರ: ಈಜಲು ಹೋಗಿದ್ದ ಬೆಂಗಳೂರಿನ ಮೂವರು MBBS ವಿದ್ಯಾರ್ಥಿಗಳು ನಾಪತ್ತೆ, ತೀವ್ರ ಶೋಧ

ಈಜಲು ಹೋಗಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ರಾಮನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ರಾಮನಗರ: ಈಜಲು ಹೋಗಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ರಾಮನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ರಾಮನಗರ ಜಿಲ್ಲೆಯ ಕನಕಪುರದ ಮಾವತ್ತೂರು ಕೆರೆಯಲ್ಲಿ ಮಂಗಳವಾರ ಈ ದುರಂತ ನಡೆದಿದ್ದು, ನಾಪತ್ತೆಯಾದವರನ್ನು ಸಚಿನ್ (26 ವರ್ಷ),ಜಾವೀದ್ ಅಹಮದ್ ಮುಲ್ಲಾ(26ವರ್ಷ), ನಿರಂಜನ್(26ವರ್ಷ) ಎಂದು ಗುರುತಿಸಲಾಗಿದೆ.

ನಾಪತ್ತೆಯಾದ ಎಲ್ಲ ವಿದ್ಯಾರ್ಥಿಗಳು ಕೆರೆ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ಮೂವರು ದಯಾನಂದ ಸಾಗರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.  ನಿನ್ನೆಸೋಮವಾರ ಮಧ್ಯಾಹ್ನ ಕಾಲೇಜಿನಿಂದ ವಿದ್ಯಾರ್ಥಿಗಳು ಹೊರಹೋಗಿದ್ದರು. ಬಳಿಕ ರಾಮನಗರದ ಕನಕಪುರದ ಮಾವತ್ತೂರು ಕೆರೆಗೆ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಈಜಲು ಹೋಗಿ ನಾಪತ್ತೆಯಾಗಿದ್ದಾರೆ. 

ಮಾವತ್ತೂರು ಕೆರೆ ಬಳಿ ಬೈಕ್ ಪತ್ತೆಯಾಗಿದ್ದು, ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!