ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬೊಮ್ಮಾಯಿ
ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
ಬೆಂಗಳೂರು: ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಲೇಔಟ್, ವಸತಿ ಸಮುಚ್ಛಯಗಳನ್ನು ನಿರ್ಮಿಸಿದ ಕಾರಣ, ಮಳೆ ನೀರು ಸರಾಗವಾಗಿ ಹರಿಯದೇ ಬಳಹಷ್ಟು ತೊಂದರೆಗಳಾಗಿವೆ. ಹಾಗಾಗಿ ಈ ಕೃತ್ಯ ಯಾರೇ ಎಸಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಐಟಿಬಿಟಿ ಕಂಪೆನಿಗಳು, ಜನಸಾಮಾನ್ಯರು ಮಳೆನೀರಿನಲ್ಲಿ ಸಿಲುಕಿ ಪರದಾಡುವಂತಾಯಿತು. ಐಟಿಬಿಟಿ ವಲಯದವರೂ ಒತ್ತುವರಿ ಮಾಡಿಕೊಂಡಿದ್ದಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಇದನ್ನು ಓದಿ: ಮುಂದುವರಿದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿ ಭ್ರಷ್ಟ ಅಧಿಕಾರಿಗಳ ಮೇಲೆ ಮಾಲೀಕರ ಆರೋಪ
ರಾಜಕಾಲುವೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತೇವೆ. ಇಷ್ಟು ದಿನ ಬಿಟ್ಟು ಬಿಟ್ಟು ಕೆಲಸ ಮಾಡಲಾಗುತ್ತಿತ್ತು. ಇನ್ನು ಮುಂದೆ ನಿರಂತರವಾಗಿ ರಾಜಕಾಲುವೆ ಕಾಮಗಾರಿ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.