ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 186 ಸೇರಿ ರಾಜ್ಯದಲ್ಲಿ 344 ಮಂದಿಗೆ ಪಾಸಿಟಿವ್; 3 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ344 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,59,218ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ344 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,59,218ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40225ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 186 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1868980ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 522 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4015187ಕ್ಕೆ ಏರಿಕೆಯಾಗಿದೆ. ಇನ್ನು 3764 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್