ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಒತ್ತುವರಿ ಮಾಡಿಕೊಂಡ ಜಾಗಗಳನ್ನು ತೆರವುಗೊಳಿಸುವ ಕಾರ್ಯವನ್ನು ಬಿಬಿಎಂಪಿ ಮಾಡುತ್ತಿದೆ. ಈಗಾಗಲೇ ಹಲವು ಕಟ್ಟಡಗಳನ್ನು, ಗೋಡೆಗಳನ್ನು ಮತ್ತು ಕಾಂಪೌಂಡ್ ಕೆಡವುವ ಕೆಲಸದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ.
ಬಿಬಿಎಂಪಿ ಬಿಟ್ಟ ಬುಲ್ಡೋಜರ್ ಕೇವಲ ಸಾಮಾನ್ಯ ಜನರ ಮನೆಗಳನ್ನು ಮಾತ್ರ ಕೆಡುವುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅದಕ್ಕೆ ನಟಿ ರಮ್ಯಾ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಶ್ನೆ ಕೇಳಿದ್ದಾರೆ.
ಈ ತೆರವು ವಿಚಾರದಲ್ಲಿ ಉಳ್ಳವರಿಗೊಂದು, ಸಾಮಾನ್ಯ ಜನರಿಗೆ ಇನ್ನೊಂದು ನ್ಯಾಯ ಎಂಬ ಆರೋಪ ಕೇಳಿಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಪತ್ರಕರ್ತರೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನ ಮಾಡಿದ್ದರು.
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಮಹಾದೇವಪುರ ವಲಯದಲ್ಲಿ ಐಟಿ ಪಾರ್ಕ್ಗಳ ನಿರ್ಮಾಣದ ಸಂದರ್ಭದಲ್ಲಿ ಡೆವಲಪರ್ಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಮಳೆ ನೀರು ಹರಿದು ಹೋಗಬೇಕಿದ್ದ ಒಳಚರಂಡಿಗಳ ಒತ್ತುವರಿ ಲಿಸ್ಟ್ ಇಲ್ಲಿದೆ ಎಂದು ಬರೆದುಕೊಂಡಿದ್ದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನ ಟ್ವಿಟರ್ನಲ್ಲಿ ಲಗತ್ತಿಸಿದ್ದರು.
ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ರಮ್ಯಾ, ಕಾನೂನು ರೂಪಿಸುವವರೇ ಕೆಲವರು ಕಾನೂನು ಮುರಿದಿದ್ದಾರೆ. ಈ ಲಿಸ್ಟ್ನಲ್ಲಿರೋದು ಬೆಂಗಳೂರಿನ ಪ್ರಮುಖ ಬಿಲ್ಡರ್ಸ್. ನನಗೆ ಭರವಸೆ ಇದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಲ್ಲರಿಗೂ ಕಾನೂನು ಒಂದೇ ರೀತಿಯಲ್ಲಿ ಅಪ್ಲೈ ಮಾಡ್ತಾರೆ ಎಂದು ತಿವಿದಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ 28 ಶಾಸಕರ ಪೈಕಿ 26 ಮಂದಿಯದ್ದು ರಿಯಲ್ ಎಸ್ಟೇಟ್ ವ್ಯವಹಾರ: ಚುನಾವಣೆಯಲ್ಲಿ ಹೆಚ್ಚಾಗಿ ಅವರಿಗೆ ಟಿಕೆಟ್ ಏಕೆ?
ಯಾಕಂದ್ರೆ ಒತ್ತುವರಿ ತೆರವು ವಿಚಾರದಲ್ಲಿ ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ಇನ್ನೊಂದು ನ್ಯಾಯ ಎಂಬ ಆರೋಪಗಳು ಕೇಳಿಬಂದಿದೆ. ಇದೇ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಮ್ಯಾ, ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿ ಅನ್ವಯ ಆಗುತ್ತಾ? ಒತ್ತುವರಿ ಮಾಡಿಕೊಂಡ ದೊಡ್ಡ ದೊಡ್ಡ ಬಿಲ್ಡರ್ಸ್ಗಳ ಮೇಲೆ ಕ್ರಮ ಆಗುತ್ತಾ ಎಂಬ ಅರ್ಥದದಲ್ಲಿ ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಪ್ರತಿಷ್ಠಿತ ಕಂಪನಿಗಳು, ಶಾಲಾ, ಕಾಲೇಜುಗಳು ಮತ್ತು ಪ್ರತಿಷ್ಠಿತ ಬಿಲ್ಡರ್ಸ್ ಮನೆಗಳು ಹಾಗೂ ಶಾಸಕರು ಮತ್ತು ಮಂತ್ರಿಗಳ ಒಡೆತನದ ಬಿಲ್ಡಿಂಗ್ ಗಳು ಕೂಡ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿವೆ. ಪ್ರಭಾವಿಗಳ ಮನೆಗೂ ಬುಲ್ಡೋಜರ್ ನುಗ್ಗುತ್ತದೆ ಎಂದು ನಾನು ಸಿಎಂ ಮೇಲೆ ಭರವಸೆ ಇಟ್ಟಿದ್ದೇನೆ. ಕಾನೂನು ಎಲ್ಲರಿಗೂ ಒಂದೇ’ ಎಂದು ನೆನಪಿಸಿದ್ದಾರೆ.