ಬಿಎಸ್ ಯಡಿಯೂರಪ್ಪ 
ರಾಜ್ಯ

ಬಿಎಸ್ ವೈ, ಕುಟುಂಬ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಜಡ್ಜ್ ಕೋರ್ಟ್ ಬುಧವಾರ ಆದೇಶಿಸಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಜಡ್ಜ್ ಕೋರ್ಟ್ ಬುಧವಾರ ಆದೇಶಿಸಿದೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಖಾಸಗಿ ದೂರಿನ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೆಪ್ಟೆಂಬರ್ 7 ರಂದು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು. ಒಂದು ವಾರದ ನಂತರ ಇದೀಗ ನ್ಯಾಯಾಲಯ ಈ ಆದೇಶ ಪ್ರಕಟಿಸಿದೆ. ದೂರುದಾರ ಟಿಜೆ ಅಬ್ರಹಾಂ ಅವರಿಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರಿಂದ ಕೆಳ ನ್ಯಾಯಾಲಯ ಜುಲೈ 8ರಂದು ದೂರನ್ನು ವಜಾಗೊಳಿಸಿತ್ತು. ಆದರೆ, ದೂರುದಾರರು ರಾಜ್ಯಪಾಲರಿಂದ ಮಂಜೂರಾತಿ ಪಡೆಯಲು ಸಮರ್ಥ ಅಧಿಕಾರಿಯಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗೆ  ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂ. ನಗದು ಹಾಗೂ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದ ಆರೋಪದಡಿ ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ.

ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. "ಈ ಯಾವುದೇ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ, ನಾನು ಈ ಎಲ್ಲಾ (ಪ್ರಕರಣಗಳಿಂದ) ಹೊರಬರುತ್ತೇನೆ. ಈ ವಿಷಯಗಳು ಸಹಜ, ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ  ಎಂದು ಅವರು ಹೇಳಿದರು. ತಮ್ಮ ವಿರುದ್ದ ಷಡ್ಯಂತ್ರ ನಡೆದಿದೆ ಎಂದು ಅವರು ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT