ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ..
ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಲಾಗಿದೆ.
ಜಾಮೀನು ಕೋರಿ ಶ್ರೀಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.
ಇದೇ ಕೇಸ್ನಲ್ಲಿ ಎ2 ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿ ಕೂಡ ವಿಸ್ತರಣೆ ಮಾಡಲಾಗಿದ್ದು ಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.