ಡಿ.ಕೆ ಶಿವಕುಮಾರ್ 
ರಾಜ್ಯ

ಡಿಕೆ ಶಿವಕುಮಾರ್​ಗೆ ಮತ್ತೆ ಇಡಿ ಸಮನ್ಸ್: ಅಧಿವೇಶನದ ವೇಳೆ ಸಮನ್ಸ್ ಜಾರಿ ರಾಜಕೀಯ ಸಂಚು ಎಂದ ಕೆಪಿಸಿಸಿ ಅಧ್ಯಕ್ಷ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಇನ್ನು ಇಡಿ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಪ್ರಸ್ತುತ ರಾಜ್ಯದಲ್ಲಿ ರಾಹುಲ್ ಗಾಂಧಿಯವರ 'ಭಾರತ್ ಜೋಡೋ ಯಾತ್ರೆ' ಆಗಮನದ ಸಿದ್ಧತೆಯಲ್ಲಿ ನಿರತರಾಗಿದ್ದೇವೆ ಮತ್ತು ಅಧಿವೇಶನ ನಡುವೆಯು ಸಮದಲ್ಲಿ ಸಮನ್ಸ್ ನೀಡಿದ್ದಾರೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ಸಮಯದಲ್ಲಿ ಸಮನ್ಸ್ ನೀಡಿರುವುದು ರಾಜಕೀಯ ಸಂಚು ಎಂದು ಆರೋಪಿಸಿದ್ದಾರೆ.

"ಭಾರತ್ ಜೋಡೋ ಯಾತ್ರೆ ಮತ್ತು ವಿಧಾನಸಭೆ ಅಧಿವೇಶನದ ಮಧ್ಯೆ ಅವರು ಮತ್ತೆ ನನಗೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ, ಆದರೆ ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇಡಿ ದಾಖಲಿಸಿದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಡಿಕೆ ಶಿವಕುಮಾರ್ ಮತ್ತು ಇತರ ಆರೋಪಿಗಳಿಗೆ ಕಳೆದ ಆಗಸ್ಟ್ ನಲ್ಲಿ ಜಾಮೀನು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!