ಸರ್ ಎಂ ವಿಶ್ವೇಶ್ವರಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಸರ್ ಎಂ ವಿಶ್ವೇಶ್ವರಯ್ಯ ಜನ್ಮಜಯಂತಿ: ಇಂಜಿನಿಯರ್ ದಿನ ಆಚರಣೆ, ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ

ಸೆಪ್ಟೆಂಬರ್ 15, ಎಂಜಿನಿಯರ್ ದಿನ. ಕರ್ನಾಟಕ, ಭಾರತ ದೇಶ ಕಂಡ ಅಪ್ರತಿಮ, ಬುದ್ಧಿವಂತ ಎಂಜಿನಿಯರ್ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನರ ಜನ್ಮ ಜಯಂತಿ ಇಂದು. ಈ ಕಾರಣದಿಂದ ಈ ದಿನವನ್ನು ಎಂಜಿನಿಯರ್ ದಿನ ಎಂದು ಆಚರಿಸಲಾಗುತ್ತದೆ.

ನವದೆಹಲಿ/ಬೆಂಗಳೂರು: ಸೆಪ್ಟೆಂಬರ್ 15, ಎಂಜಿನಿಯರ್ ದಿನ (Engineers day). ಕರ್ನಾಟಕ, ಭಾರತ ದೇಶ ಕಂಡ ಅಪ್ರತಿಮ, ಬುದ್ಧಿವಂತ ಎಂಜಿನಿಯರ್ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನರ ಜನ್ಮ ಜಯಂತಿ ಇಂದು. ಈ ಕಾರಣದಿಂದ ಈ ದಿನವನ್ನು ಎಂಜಿನಿಯರ್ ದಿನ ಎಂದು ಆಚರಿಸಲಾಗುತ್ತದೆ.

1968, ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನ ಆಚರಣೆಯನ್ನು ಪ್ರಾರಂಭಿಸಲಾಯಿತು. ಈ ದಿನ ಇಂಜಿನಿಯರ್‌ ದಿನವನ್ನು ಆಚರಣೆ ಮಾಡುವ ಮೂಲಕ ವಿಶ್ವೇಶ್ವರಯ್ಯ (Sir M Vishweshwarayya) ಅವರ ಜೀವನವನ್ನು ಮತ್ತು ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳಲಾಗುತ್ತದೆ.

ಸರ್‌. ಎಂ. ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15,1861 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು.

ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸಾಧನೆ ಯಾವಾಗಲು ಶಾಶ್ವತವಾಗಿರುತ್ತದೆ. ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು 1903 ರಲ್ಲಿ ಸ್ವಯಂಚಾಲಿತ ನೀರಿನ ಪ್ರವಾಹ ಗೇಟ್‌ಗಳನ್ನು ವಿನ್ಯಾಸಗೊಳಿಸಿ ಅದಕ್ಕೆ ಪೇಟೆಂಟ್ ಪಡೆದಿದ್ದರು. ಇದನ್ನು ಮೊದಲು ಪುಣೆಯ ಖಡಕ್ವಾಸ್ಲಾ ಜಲಾಶಯದಲ್ಲಿ ಸ್ಥಾಪಿಸಲಾಯಿತು. ಮೈಸೂರಿನ ಕನ್ನಂಬಾಡಿ ಅಣೆಕಟ್ಟು ಕಟ್ಟಿದ ಶ್ರೇಯಸ್ಸು ಸರ್ ಎಂ ವಿಶ್ವೇಶ್ವರಯ್ಯನವರದ್ದು.

ಜಲ ವಿದ್ಯುತ್ತ ಶಕ್ತಿ ಯೋಜನೆಯ ಹಿಂದೆಯೂ ವಿಶ್ವೇಶ್ವರಯ್ಯ ಅವರ ಪಾತ್ರ ಪ್ರಮುಖವಾಗಿತ್ತು. ಕರ್ನಾಟಕದಲ್ಲಿ ಕೃಷ್ಣ ರಾಜ ಸಾಗರ ಜಲಾಶಯ ನಿರ್ಮಿಸುವುದರಿಂದ ಹಿಡಿದು ಹೈದರಾಬಾದ್‌ನಲ್ಲಿ ಪ್ರವಾಹ ತಡೆಗಟ್ಟುವಿಕೆ ಯೋಜನೆ ರೂಪಿಸುವ ತನಕ ಸರ್. ಎಂ ವಿಶ್ವೇಶ್ವರಯ್ಯ ಅವರು ಸಾಧನೆ ಮಾಡಿದ್ದರು.

ಇಂಜಿನಿಯರ್ ಗಳ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿರುವ ನುರಿತ ಮತ್ತು ಪ್ರತಿಭಾವಂತ ಇಂಜಿನಿಯರ್‌ಗಳ ಸಮೂಹವನ್ನು ಹೊಂದಲು ನಮ್ಮ ರಾಷ್ಟ್ರವು ಧನ್ಯವಾಗಿದೆ. ಹೆಚ್ಚಿನ ಇಂಜಿನಿಯರಿಂಗ್ ಕಾಲೇಜುಗಳನ್ನು ನಿರ್ಮಿಸುವುದು ಸೇರಿದಂತೆ ಇಂಜಿನಿಯರಿಂಗ್ ಕಲಿಯಲು ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT