ಬಸವರಾಜ ಬೊಮ್ಮಾಯಿ 
ರಾಜ್ಯ

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್ ಎಂ.ವಿ ಜನ್ಮ ದಿನಾಚರಣೆ: ಸಿಎಂ.ಬೊಮ್ಮಾಯಿ

ಮುಂದಿನ ವರ್ಷ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  

ಬೆಂಗಳೂರು: ಮುಂದಿನ ವರ್ಷ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  

ಅವರು ಇಂದು ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘದ ಸಹಭಾಗಿತ್ವದಲ್ಲಿ ಕೆ.ಆರ್.ವೃತ್ತದ ಬಳಿ  ಆಯೋಜಿಸಿದ್ದ ಅಭಿಯಂತರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ  ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನವನ್ನು ಇಂಜಿನಿಯರ್ಸ್ ದಿನ ವನ್ನಾಗಿ ಆಚರಿಸುತ್ತೇವೆ. ಈ ವರ್ಷ ಭಾರತ ಸರ್ಕಾರವೂ ಕೂಡ ಅಧ್ಯಯನ ಮಾಡಿ ಎಲ್ಲಾ ರಾಜ್ಯ ಗಳಲ್ಲಿ  ಸರ್ಕಾರವೇ ಅಭಿಯಂತರರ ದಿನಾಚರಣೆ ಆಚರಿಸಲು ಸೂಚಿಸಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದರು. 

ಸರ್.ಎಂ.ವಿಶ್ವೇಶ್ವರಯ್ಯ ಅವರು ಕನ್ನಡನಾಡಿನ ಅತ್ಯಂತ ಹೆಮ್ಮೆಯ ಪುತ್ರ. ಅವರು ಸದಾ ಕಾಲ ನಮಗೆ ಪ್ರೇರಣೆ. ಕನ್ನಡ ನಾಡು ಕಟ್ಟಿದ ಧೀಮಂತ ವ್ಯಕ್ತಿ ಎಂದರು. 

ಸರ್. ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿಯೇ ಸ್ಫೂರ್ತಿ ಇದೆ. 90 ವರ್ಷಕ್ಕಿಂತ ಹೆಚ್ಚು ಕಾಲ ಬಾಳಿ, ಬದುಕಿದ ಅವರ ಬದುಕಿನ ಪ್ರತಿ ಕ್ಷಣವೂ ನಾಡಿನ, ದೇಶನ ಅಭಿವೃದ್ಧಿ, ಜನರ ಒಳಿತಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಇಷ್ಟು ವೈವಿಧ್ಯಮಯ ಜ್ಞಾನ ಮತ್ತು ಬದ್ಧತೆ ಇರುವ ವ್ಯಕ್ತಿಗಳು ಬಹಳ ಕಡಿಮೆ. ನಿಜವಾದ ದೇಶಭಕ್ತರು, ನಾಡು ಕಟ್ಟಿದವರು ಅವರು. ಕೇವಲ ಅಣೆಕಟ್ಟುಗಳನ್ನು, ರಸ್ತೆಗಳನ್ನು ಮಾತ್ರ ನಿರ್ಮಾಣ ಮಾಡಲಿಲ್ಲ. ಇಂಧನ ಕ್ಷೇತ್ರದಲ್ಲಿಯೂ ಅವರ ಕೊಡುಗೆ ಅಪಾರ. ಬೃಹತ್ ಕಾರ್ಖಾನೆಗಳ ನಿರ್ಮಾಣವನ್ನು ಕೂಡ ಮಾಡಿದರು ಎಂದರು. 

ಕರ್ನಾಟಕ ರಾಜ್ಯದ ಅಧೀನದಲ್ಲಿರುವ  ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆ, ಸಿಮೆಂಟ್, ಕಾಗದ ಮುಂತಾದ ಕಾರ್ಖಾನೆಗಳನ್ನು ಮೈಸೂರು ಮಹಾರಾಜರ ಆಶ್ರಯದಲ್ಲಿ ಆರಂಭಿಸಿದರು. ಕೆ.ಆರ್.ಎಸ್ ಅಣೆಕಟ್ಟು ಕಟ್ಟಿ ನಮ್ಮ ಕಾವೇರಿ ಜಲಾನಯನ ಭಾಗದ ರೈತರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಬದ್ಧತೆಯನ್ನು ಸಹ ಮೆರೆದ ಅವರು ಹೆಣ್ಣುಮಕ್ಕಳಿಗೆ ವಿಶೇಷವಾಗಿ ಕಾಲೇಜುಗಳ ನಿರ್ಮಾಣ, ಮೀಸಲಾತಿ, ಆರ್ಥಿಕ ವಲಯದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪ್ರಾರಂಭಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಕ್ರಿಯಾಶೀಲತೆ ಮೆರೆದಿದ್ದಾರೆ ಎಂದರು. 

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT