ರಾಜ್ಯ

ದೊಡ್ಡಬಳ್ಳಾಪುರ: ಬೈಕ್​ಗೆ ಕ್ಯಾಂಟರ್​ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

Vishwanath S

ದೊಡ್ಡಬಳ್ಳಾಪುರ: ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮ ಬಂದರ್ಲಹಳ್ಳಿ ಬಳಿ ನಡೆದಿದೆ. 

ದೊಡ್ಡಬಳ್ಳಾಪುರದ 20 ವರ್ಷದ ಮೌಲಾ, 20 ವರ್ಷದ ಉಮರ್ ಮೃತಪಟ್ಟ ದುರ್ದೈವಿಗಳು.

ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು.

SCROLL FOR NEXT