ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 230 ಸೇರಿ ರಾಜ್ಯದಲ್ಲಿ 426 ಮಂದಿಗೆ ಪಾಸಿಟಿವ್; ನಾಲ್ವರು ಸಾವು

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 426 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,60,681ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,231ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 230 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,69,754ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 492 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,16,790ಕ್ಕೆ ಏರಿಕೆಯಾಗಿದೆ. ಇನ್ನು 3,618 ಸಕ್ರಿಯ ಪ್ರಕರಣಗಳಿವೆ.

SCROLL FOR NEXT