ರಾಜ್ಯ

ಬಿಬಿಎಂಪಿ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

Lingaraj Badiger

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೀಸಲಾತಿ ಶೇ. 50 ಮಿತಿಗೊಳಿಸಲು ಬಿಬಿಎಂಪಿ(ತಿದ್ದುಪಡಿ) ವಿಧೇಯಕ 2022 ಅನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರ ಕೆಲ ತಿಂಗಳ ಹಿಂದೆ ಸುಗ್ರೀವಾಜ್ಞೆ ಸಹ ಹೊರಡಿಸಿತ್ತು.

ಮಸೂದೆ ಪ್ರಕಾರ, ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒದಗಿಸಿರುವಂತೆ ಬಿಬಿಎಂಪಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿ ಶೇ.50 ರಷ್ಟು ಮಿತಿಗೊಳಿಸಲು ಈ ವಿಧೇಯಕ ಅವಕಾಶ ಕಲ್ಪಿಸಲಿದೆ. 

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದರು. ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆ ನಡೆಸಲು ಸೂಚನೆ ನೀಡಿದ್ದು, ಶೇ.50ರ ಮೀಸಲಾತಿ ಮಿತಿಯಲ್ಲೇ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದ್ದಾರೆ.

SCROLL FOR NEXT