ಪ್ರಾತಿನಿಧಿಕ ಚಿತ್ರ 
ರಾಜ್ಯ

ಹಣ ದುರುಪಯೋಗ: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷನ ಬಂಧಿಸಿದ ಇ.ಡಿ

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ಅಧ್ಯಕ್ಷ ಕೆ. ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ಬಂಧಿಸಿದ್ದಾರೆ.

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ಅಧ್ಯಕ್ಷ ಕೆ. ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ಬಂಧಿಸಿದ್ದಾರೆ.

ರಾಮಕೃಷ್ಣ ಅವರು 1000 ಕೋಟಿ ರೂಪಾಯಿಗೂ ಹೆಚ್ಚು ಸಾರ್ವಜನಿಕ ಠೇವಣಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ.

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಗಳಿಗಿಂತ ಹೆಚ್ಚಿನ ಬಡ್ಡಿದರದ ಭರವಸೆ ನೀಡಿ ಬ್ಯಾಂಕ್‌ನಲ್ಲಿ ಠೇವಣಿ ಇರಿಸುವಂತೆ ಮಾಡಿ, ಆ ಹಣವನ್ನು ಬ್ಯಾಂಕ್ ಉದ್ಯೋಗಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಕೆ. ರಾಮಕೃಷ್ಣ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2,876 ಮಂದಿಗೆ 1,544.43 ಕೋಟಿ ರೂಪಾಯಿಯನ್ನು ಸಾಲವಾಗಿ ನೀಡಲಾಗಿದೆ. ಇದರಲ್ಲಿ 892.85 ಕೋಟಿ ರೂಪಾಯಿಯನ್ನು ಬೋಗಸ್‌ ದಾಖಲೆಗಳಿಗೆ ಸಾಲವಾಗಿ ನೀಡಲಾಗಿದೆ ಎಂದು ಇವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ದೂರು ದಾಖಲಾಗಿತ್ತು.

ದೂರಿನ ಆಧಾರದ ಮೇಲೆ, ರಾಮಕೃಷ್ಣ ಮತ್ತು ಇತರರ ವಿರುದ್ಧ ಬಸವನಗುಡಿ ಪೊಲೀಸರು ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ಕರ್ನಾಟಕ ಸಂರಕ್ಷಣಾ ಕಾಯ್ದೆ, 2004 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕಲಿ ಖಾತೆಗಳನ್ನು ಸೃಷ್ಟಿಸಿ, ಸಾಲಕ್ಕೆ ಸೂಕ್ತ ಭದ್ರತೆಯನ್ನು ಪಡೆಯದೆ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ವಿವಿಧ ವ್ಯಕ್ತಿಗಳಿಗೆ ಹಣವನ್ನು ನೀಡಲಾಗಿದೆ. ರಾಮಕೃಷ್ಣ ಅವರ 45 ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಅವರನ್ನು ಐದು ದಿನಗಳ ಕಾಲ ಇ.ಡಿ ಕಸ್ಟಡಿಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT