ರಸ್ತೆಯಲ್ಲಿ ಸಿಲುಕಿಕೊಂಡ ಬಸ್ (ಎಡ), ಗ್ರಾಮ ಪಂಚಾಯಿತಿ ಕಚೇರಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ಶ್(ಬಲ) 
ರಾಜ್ಯ

ಗದಗ: ಹದಗೆಟ್ಟ ರಸ್ತೆಗಳ ವಿರುದ್ಧ ಗ್ರಾಮ ಪಂಚಾಯಿತಿ ಕಚೇರಿಗೆ ಘೇರಾವ್ ಹಾಕಿದ ವಿದ್ಯಾರ್ಥಿಗಳು

ಗದಗ ಜಿಲ್ಲೆಯ ಗೊಜನೂರು ಗ್ರಾಮದಲ್ಲಿ ಹಠಾತ್‌ ಪ್ರವಾಹಕ್ಕೆ ಬಸ್‌ ಜಲಾವೃತಗೊಂಡಿದ್ದು, ರಸ್ತೆ ಹದಗೆಟ್ಟಿರುವ ವಿರುದ್ಧ ಶಾಲಾ ಮಕ್ಕಳು ಶಾಲೆಗೆ ತೆರಳದೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

ಗದಗ: ಜಿಲ್ಲೆಯ ಗೊಜನೂರು ಗ್ರಾಮದಲ್ಲಿ ಹಠಾತ್‌ ಪ್ರವಾಹಕ್ಕೆ ಬಸ್‌ ಜಲಾವೃತಗೊಂಡಿದ್ದು, ರಸ್ತೆ ಹದಗೆಟ್ಟಿರುವ ವಿರುದ್ಧ ಶಾಲಾ ಮಕ್ಕಳು ಶಾಲೆಗೆ ತೆರಳದೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ. ಘಟನೆ ಗುರುವಾರ ನಡೆದಿದ್ದು, ಕೆಲವು ಗ್ರಾಮಸ್ಥರು ಪ್ರತಿಭಟನೆಯ ವಿಡಿಯೋಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಬಳಿಕ ಬೆಳಕಿಗೆ ಬಂದಿದೆ.

ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮದ ರಸ್ತೆ ಹದಗೆಟ್ಟಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಕಚೇರಿಯ ಅವ್ಯವಹಾರದ ವಿರುದ್ಧ ಮಕ್ಕಳು ಪ್ರತಿಭಟನೆ ನಡೆಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಈ ನಡೆ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.

ಗೊಜನೂರಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಶೆಟ್ಟಿಕೆರೆ, ಚೆನ್ನಪಟ್ಟಣ, ಅಕ್ಕಿಗುಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಾರೆ.

ಪ್ರವಾಹದ ನೀರಿನ ಮಟ್ಟ ತಗ್ಗಿದ ಹಿನ್ನೆಲೆಯಲ್ಲಿ ಗುರುವಾರ ಬಸ್ ಸಂಚಾರ ಆರಂಭಿಸಲಾಗಿದೆ. ಆದರೆ, ಬಸ್‌ ಸಿಕ್ಕಿಹಾಕಿಕೊಂಡಿದ್ದು, ಶಾಲೆಗೆ 2 ಕಿ.ಮೀ ನಡೆದುಕೊಂಡು ಹೋಗುವುದೊಂದೇ ದಾರಿ ಎಂಬುದನ್ನು ತಿಳಿದ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಕೂಡಲೇ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಬಳಿಕ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಮಳೆಯಿಂದಾಗಿ ರಸ್ತೆಗಳು ಹಾಳಾಗಿರುವುದನ್ನು ಮನವರಿಕೆ ಮಾಡಿಕೊಟ್ಟು ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದರು. ಗೊಜನೂರಿನ ಗ್ರಾಮಸ್ಥರು ಹಾಗೂ ರೈತರು ಸಿಲುಕಿಕೊಂಡಿದ್ದ ಬಸ್ ಮುಂದೆ ಹೋಗಲು ಸಹಕರಿಸಿದರು.

'ನಾವು ಭಾರವಾದ ಬ್ಯಾಗುಗಲು, ಊಟದ ಚೀಲ ಮತ್ತು ನೀರಿನ ಬಾಟಲಿಗಳೊಂದಿಗೆ ಶಾಲೆಗೆ ಹೋಗುತ್ತಿದ್ದೆವು. ಹಿರಿಯರೊಬ್ಬರು, ನಮ್ಮನ್ನು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಎಂದು ಹೇಳಿದರು. ನಾವೆಲ್ಲ ಅವರ ಜೊತೆ ಹೋಗಿ ಪ್ರತಿಭಟನೆ ಮಾಡಿದೆವು. ಹಲವು ದಿನಗಳಿಂದ ರಸ್ತೆ ಹದಗೆಟ್ಟಿದೆ' ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ಗೊಜನೂರಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮಾತನಾಡಿ, ‘ಅತಿವೃಷ್ಟಿಯಿಂದ ರಸ್ತೆ ಹಾಳಾಗಿದ್ದು, ತಹಶೀಲ್ದಾರ್ ಅವರ ಗಮನಕ್ಕೂ ತಂದಿದ್ದೇವೆ. ಮಳೆ ನಿಂತ ಬಳಿಕ ದುರಸ್ತಿಪಡಿಸುತ್ತೇವೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ