ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 145 ಸೇರಿ ರಾಜ್ಯದಲ್ಲಿ 306 ಮಂದಿಗೆ ಪಾಸಿಟಿವ್; ಇಬ್ಬರು ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ306 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,463ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40234ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 145 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1870114ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4017441ಕ್ಕೆ ಏರಿಕೆಯಾಗಿದೆ. ಇನ್ನು 3746 ಸಕ್ರಿಯ ಪ್ರಕರಣಗಳಿವೆ.

SCROLL FOR NEXT