ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 140 ಸೇರಿ ರಾಜ್ಯದಲ್ಲಿ 253 ಮಂದಿಗೆ ಪಾಸಿಟಿವ್, ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ253 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,716ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 20 Sept 2022, 1:38 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ253  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,716ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 431 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4017,872ಕ್ಕೆ ಏರಿಕೆಯಾಗಿದೆ. ಇನ್ನು 3568 ಸಕ್ರಿಯ ಪ್ರಕರಣಗಳಿವೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಇದರೊಂದಿಗೆ ಸಾವಿನ ಸಂಖ್ಯೆ 40234 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Advertisement

ಬೆಂಗಳೂರಿನಲ್ಲಿ ಇಂದು 140 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,70,254ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments