ರಾಜ್ಯ

ಪರಿಸರ ಪ್ರೇಮಿ, ರಾಜ್ಯಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

Shilpa D

ದಾವಣಗೆರೆ: ಜನರಿಗೆ ಪಡಿತರ ವಿತರಣೆಯಲ್ಲಿ ಗೋಲ್ ಮಾಲ್ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯ ಸಿಗದ ಹಿನ್ನೆಲೆ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಾಚಾರಿ(68) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯೊಂದರ ಅವ್ಯವಹಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯ ಸಿಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ‌ ಮಿಟ್ಲಕಟ್ಟೆ ಗ್ರಾಮದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜನರಿಗೆ ಅಕ್ಕಿ ವಿತರಿಸದೇ ನ್ಯಾಯಬೆಲೆ ಅಂಗಡಿಯವನಿಂದ ವಂಚನೆ ಆಗುತ್ತಿದ್ದು ಅಂಗಡಿ ಮಾಲೀಕನ ಜೊತೆ ವೀರಾಚಾರಿ ಹೋರಾಟಕ್ಕೆ ಮುಂದಾಗಿದ್ದರು. ಈ ವೇಳೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದರಂತೆಯೇ ನ್ಯಾಯ ಸಿಗದ ಹಿನ್ನೆಲೆ ಇಂದು ನೇಣಿಗೆ ಶರಣಾಗಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ವೀರಾಚಾರಿ ಚಿರಪರಿಚಿತರಾಗಿದ್ದರು. ಸಾಲುಮರಗಳನ್ನು ಬೆಳೆಸಿದ್ದ ಪರಿಸರ ಪ್ರೇಮಿ ಮಿಟ್ಲಕಟ್ಟೆ ಅವರಿಗೆ ಈ ಹಿಂದೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಕೂಡ ನೀಡಿತ್ತು.

SCROLL FOR NEXT