ಬಿಬಿಎಂಪಿ ತೆರವು ಕಾರ್ಯಾಚರಣೆ 
ರಾಜ್ಯ

ಮಹದೇವಪುರ ವಲಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ; ನೋಡ ನೋಡುತ್ತಿದ್ದಂತೆಯೇ ಎರಡು ಅಂತಸ್ತಿನ ಮನೆ ಧರೆಗೆ!

ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮುನ್ನೇನಕೊಳಲಿನ ಶಾಂತಿನಿಕೇತನ ಲೇಔಟ್ ನಲ್ಲಿ ಒಂದು ಅಂತಸ್ತಿನ ಕಟ್ಟಡ, ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ 4 ಅಂತಂಸ್ತಿನ ಕಟ್ಟಡ, ಸರ್ಜಾಪುರ ರಸ್ತೆಯ ಗ್ರೀನ್ ವುಡ್ ರೆಸಿಡೆನ್ಸಿ ಬಳಿ ಸ್ಲ್ಯಾಬ್ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮುನ್ನೇನಕೊಳಲಿನ ಶಾಂತಿನಿಕೇತನ ಲೇಔಟ್ ನಲ್ಲಿ ಒಂದು ಅಂತಸ್ತಿನ ಕಟ್ಟಡ, ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ 4 ಅಂತಂಸ್ತಿನ ಕಟ್ಟಡ, ಸರ್ಜಾಪುರ ರಸ್ತೆಯ ಗ್ರೀನ್ ವುಡ್ ರೆಸಿಡೆನ್ಸಿ ಬಳಿ ಸ್ಲ್ಯಾಬ್ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಮುನ್ನೇನಕೊಳಲು ಬಳಿಯ ಶಾಂತಿ ನಿಕೇತನ ಲೇಔಟ್ ನಲ್ಲಿ ಒಂದು ಅಂತಸ್ತಿನ ಕಟ್ಟಡ(G + 1)ವನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಿಕೊಂಡಿರುತ್ತಾರೆ. ಈ ಪೈಕಿ ಈಗಾಗಲೇ ಮನೆಯಲ್ಲಿ ವಾಸವಿದ್ದವರಿಗೆ ಕೂಡಲೆ ಮನೆಯನ್ನು ಖಾಲಿ ಮಾಡಲು ಕಂದಾಯ ಇಲಾಖೆಯ ತಹಶೀಲ್ದಾರ್ ವತಿಯಿಂದ ನೋಟಿಸ್ ನೀಡಲಾಗಿತ್ತು. ಅದರಂತೆ ಮನೆಯಲ್ಲಿದ್ದವರು ಖಾಲಿ ಮಾಡಿದ ಬಳಿಕ ಇಂದು ಹಿಟಾಚಿಯ ಬ್ರೇಕರ್ ಮೂಲಕ ಸಂಪೂರ್ಣ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.

ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದ 4 ಅಂತಸ್ತಿನ ಕಟ್ಟಡ(G + 4)ವನ್ನು ದಿನಾಂಕ: 13.09.2022 ರಂದು ಕಾಂಪೌಂಡ್ ಗೋಡೆಯನ್ನು ಒಡೆದು ಮೆನೆಯಲ್ಲಿ ವಾಸವಿರುವವರಿಗೆ ಬೇರೆಡೆ ಸ್ಥಳಾಂತರವಾಗಲು ಕಂದಾಯ ಇಲಾಖೆಯ ತಹಶೀಲ್ದಾರ್ ವತಿಯಿಂದ ನೋಟಿಸ್ ನೀಡಲಾಗಿತ್ತು. ಆ ಬಳಿಕ ಮನೆಯಲ್ಲಿ ವಾಸವಿದ್ದವರೆಲ್ಲರೂ ಖಾಲಿ ಮಾಡಿದ ನಂತರ ಇಂದು ಹಿಟಾಚಿಯ ಬ್ರೇಕರ್ ಮೂಲಕ ಕಟ್ಟಡ ಮುಂಭಾಗದ ಕೆಲಭಾಗವನ್ನು ತೆರವುಗೊಳಿಸಲಾಗಿರುತ್ತದೆ. ಸದರಿ ಕಟ್ಟಡವನ್ನು ಹಿಟಾಚಿ ಮೂಲಕ ತೆರವುಗೊಳಿಸಲು ಮುಂದಾದಲ್ಲಿ ಅಕ್ಕ-ಪಕ್ಕದ ಮನೆಗಳಿಗೆ ಹಾನಿಯಾಗುವ ಸಂಭವವಿದೆ. ಆದ್ದರಿಂದ ಸಿಬ್ಬಂದಿಯ ಮೂಲಕ ಅವಶ್ಯಕ ಸಲಕರಣೆಗಳನ್ನು ಬಳಸಿಕೊಂಡು ಸಂಪೂರ್ಣ ಕಟ್ಟಡವನ್ನು ನೆಲಸಮಗೊಳಿಸಲಾಗುತ್ತದೆ.

ವಲಯ ಆಯುಕ್ತರು ಸ್ಥಳದಲ್ಲಿ ಉಪಸ್ಥಿತಿ:

ಮುನ್ನೇನಕೊಳಲು, ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ 4 ಅಂತಸ್ತಿನ ಕಟ್ಟಡ(ಉ + 4) ತೆರವು ಕಾರ್ಯಾಚರಣೆಯ ವೇಳೆ ಮಹದೇವಪುರ ವಲಯ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ವಲಯ ಜಂಟಿ ಆಯುಕ್ತರಾದ ವೆಂಕಟಾ ಚಲಪತಿ, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಉಪಸ್ಥಿತರಿದ್ದರು.

ಈ ವೇಳೆ ವಲಯ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ ರವರು, ಶಾಂತಿನಿಕೇತನ ಹಾಗೂ ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ಸುಮಾರು 500 ಮೀಟರ್ ನಷ್ಟು ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದು, ಬಾಕಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಅವಶ್ಯಕ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ತ್ವರಿತವಾಗಿ ಕಾರ್ಯನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿರುವ ಸ್ಥಳಗಳಲ್ಲಿ ಬೃಹತ್ ಮಳೆ ನೀರುಗಾಲುವೆ ವಿಭಾಗದ ಕೂಡಲೆ ಕಾಲುವೆ ನಿರ್ಮಾಣ ಮಾಡಲು ಅಗತ್ಯ ಕ್ರಮಗಳ್ನು ಕೈಗೊಳ್ಳಲು ಸೂಚನೆ ನೀಡಿದರು.

ಸ್ಲ್ಯಾಬ್ ತೆರವು ಕಾರ್ಯ ಮುಂದುವರಿಕೆ:

ಸರ್ಜಾಪುರ ರಸ್ತೆಯ ಗ್ರೀನ್ ಹುಡ್ ರೆಸಿಡೆನ್ಸ್ ಬಳಿ ಮಳೆ ನೀರುಗಾಲುವೆಯ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ನ ತೆರವು ಕಾರ್ಯಾ ಬಹತೇಕ ಪೂರ್ಣಗೊಂಡಿದ್ದು, ಸ್ಲ್ಯಾಬ್ ಗೆ ಅಳವಡಿಸಿರುವ ಕಬ್ಬಿಣದ ಕಂಬಿಗಳನ್ನು ತೆರವುಗೊಳಿಸಬೇಕಿರುತ್ತದೆ. ಜೊತೆಗೆ ಮಳೆ ನೀರುಗಾಲುವೆಯ ಮೇಲೆ ಅಳವಡಿಸುರವ ಸ್ಲ್ಯಾಬ್ ಮೇಲ್ಭಾಗದಲ್ಲಿ ಹಸಿರೀಕರಣಮಾಡಿದ್ದು, ಅದನ್ನು ತೆರವುಗೊಳಿಸಿ ನಂತರ ಬಾಕಿಯಿರುವ ಸ್ಲ್ಯಾಬ್ ತೆರವು ಕಾರ್ಯ ನಡೆಯಲಿದೆ. ಇನ್ನು ಮಾರತಹಳ್ಳಿ ಪೊಲೀಸ್ ಠಾಣೆಯ ಹಿಂಭಾಗ, ಜಲಮಂಡಳಿ ಎಸ್.ಟಿ.ಪಿ ಬಳಿ ರಾಜಕಾಲುವೆಯ ಮೇಲೆ ನಿರ್ಮಾಣ ಮಾಡಿರುವ ಸೇತುವೆ ತೆರವು ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ.’

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT