ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಡೆದ ಲಂಚದ ಹಣವನ್ನು ಹಿಂತಿರುಗಿಸುವ ವೇಳೆ ಪೊಲೀಸರಿಂದ ಕೆಎಎಸ್ ಅಧಿಕಾರಿ ಬಂಧನ

ಲಂಚ ಪಡೆಯುವಾಗ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸುವುದು ವಾಡಿಕೆ. ಆದರೆ ಇಲ್ಲೊಂದು ವಿಭಿನ್ನ ಪ್ರಕರಣದಲ್ಲಿ ಪಡೆದ ಲಂಚದ ಹಣವನ್ನು ವಾಪಸ್ ನೀಡುವ ವೇಳೆ ಕೆ ಎಎಸ್ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಲಂಚ ಪಡೆಯುವಾಗ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸುವುದು ವಾಡಿಕೆ. ಆದರೆ ಇಲ್ಲೊಂದು ವಿಭಿನ್ನ ಪ್ರಕರಣದಲ್ಲಿ ಪಡೆದ ಲಂಚದ ಹಣವನ್ನು ವಾಪಸ್ ನೀಡುವ ವೇಳೆ ಕೆ ಎಎಸ್ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬರ ಜಮೀನು ಭೂಸ್ವಾಧೀನಗೊಂಡಿಲ್ಲ ಎಂದು ಎನ್ ಒ ಸಿ ಪತ್ರ ನೀಡಲು  2.5 ಲಕ್ಷ ರು ಹಣ ಲಂಚ ಪಡೆದು, ಈ ಬಗ್ಗೆ ದೂರು ದಾಖಲಾದ ಬಳಿಕ ಲಂಚದ ಹಣವನ್ನು ಮರಳಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಭೂಮಾಪಕರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ–2 ಹುದ್ದೆಯಲ್ಲಿದ್ದ ಕೆಎಎಸ್‌ ಅಧಿಕಾರಿ ಎ.ಬಿ. ವಿಜಯಕುಮಾರ್‌ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್‌ ಬಂಧಿತರು. ಮೊದಲ ಆರೋಪಿ ಎಬಿ ವಿಜಯಕುಮಾರ್, ವಿಶೇಷ ಭೂಸ್ವಾಧೀನ ಅಧಿಕಾರಿ ಮತ್ತು ಎರಡನೇ ಆರೋಪಿ ರಘುನಾಥ್, ಭೂಮಾಪಕ. ದೂರುದಾರ ಭಗತ್ ಸಿಂಗ್ ಅರುಣ್ ಅವರಿಗೆ ಎನ್‌ಒಸಿ ನೀಡಲು ಅಧಿಕಾರಿಗಳು 2.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ 2.50 ಲಕ್ಷ ಲಂಚ ಪಡೆದು ಎನ್‌ಒಸಿ ನೀಡಿದ್ದರು.

ಈ ಸಂಬಂಧ ಅರ್ಜಿದಾರರು ಕೆಐಎಡಿಬಿ ಉಪ ಆಯುಕ್ತರಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸುತ್ತಿದ್ದಂತೆ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿಗಳು, ದೂರನ್ನು ಹಿಂಪಡೆದರೆ  2.5 ಲಕ್ಷದೊಂದಿಗೆ 50,000  ರು. ಸೇರಿಸಿ ವಾಪಸ್‌ ನೀಡುವುದಾಗಿ ಆಮಿಷ ಒಡ್ಡಿದ್ದರು.  ದೂರುದಾರರಿಗೆ ಹಣ ವಾಪಸ್‌ ನೀಡುತ್ತಿದ್ದಾಗ ಇಬ್ಬರನ್ನೂ ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

ಅಮಿತ್ ಶಾ ವಿರುದ್ಧ ಸುಳ್ಳು ಆರೋಪ; ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಲೇಬೇಕು: Kangana Ranaut

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಎಫ್‌ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ದಕ್ಷಿಣದ ಇತರೆ ರಾಜ್ಯಗಳು ದಾಪುಗಾಲು, ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ