ರಾಜ್ಯ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್

Lingaraj Badiger

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ಗುರುವಾರ ಚಿತ್ರದುರ್ಗ ಕೋರ್ಟ್ ತಿರಸ್ಕರಿಸಿದೆ. 

ಜಾಮೀನು ಕೋರಿ ಶ್ರೀಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದೆ.

ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಬುಧವಾರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಶಿವಮೊಗ್ಗದಿಂದ ಮತ್ತೆ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ.

ನ್ಯಾಯಾಲಯದ ಸೂಚನೆ ಮೇರೆಗೆ ಶ್ರೀಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಶಿವಮೂರ್ತಿ ಶ್ರೀಗಳನ್ನು ಪೊಲೀಸ್‌ ವಾಹನದಲ್ಲಿ ಚಿತ್ರದುರ್ಗದ ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಕರೆ ತರಲಾಯಿತು. ಬಳಿಕ ಅಲ್ಲಿಂದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

SCROLL FOR NEXT