ಯೋಗಿ ಆದಿತ್ಯನಾಥ್ 
ರಾಜ್ಯ

ಕೆ.ಆರ್ ಪೇಟೆ ಕುಂಭಮೇಳಕ್ಕೆ ಉತ್ತರ ಪ್ರದೇಶ ಸಿಎಂಗೆ ಆಹ್ವಾನ: ಯೋಗಿ ಆದಿತ್ಯನಾಥ್ 'ಪ್ಯಾನ್ ಇಂಡಿಯಾ' ಚಾರ್ಮ್ ರಾಜ್ಯ ಬಿಜೆಪಿಗೆ ವರದಾನ!

ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ.

ಬೆಂಗಳೂರು: ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ.

2023ರ  ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಭದ್ರಗೊಳಿಸಲು, ಅದರಲ್ಲೂ ಹಲೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಸದೃಢಗೊಳಿಸುವ ಉದ್ದೇಶದಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರೆತರಲಾಗುತ್ತಿದೆ.

ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ, ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದ್ದಾರೆ. “ಅಕ್ಟೋಬರ್ 13 ರಿಂದ 16 ರವರೆಗೆ ಕೆಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ.

ಕೆಲ ವಾರಗಳ ಹಿಂದೆ ನೆಲಮಂಗಲದಲ್ಲಿರುವ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಸಂಸ್ಥೆಯ ‘ಕ್ಷೇಮವನ’ ಉದ್ಘಾಟಿಸಲು ಯೋಗಿ ಬೆಂಗಳೂರಿಗೆ ಬಂದಿದ್ದರು.

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಭ್ರಷ್ಟಾಚಾರ ಆರೋಪ, ಕಾನೂನು ಸುವ್ಯವಸ್ಥೆ ಸಮಸ್ಯೆ ಸೇರಿದಂತೆ ಹಲವು ವಿವಾದಗಳನ್ನು ಎದುರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.

ಕಳೆದ ಕೆಲವು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಸಚಿವರು ಸೇರಿದಂತೆ ಹಲವಾರು ಬಿಜೆಪಿ ಕೇಂದ್ರ ನಾಯಕರು ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

2023 ರ ಚುನಾವಣೆಯ ಪೂರ್ವಭಾವಿಯಾಗಿ ಮುಂದಿನ ಕೆಲವು ತಿಂಗಳುಗಳಲ್ಲಿ ಯೋಗಿ ಕರ್ನಾಟಕಕ್ಕೆ ಪ್ರತಿ ತಿಂಗಳು ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. “ಅವರು (ಯೋಗಿ) ಇಲ್ಲಿ ಹೆಚ್ಚಿನ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದಾರೆ, ಇದು ಬಿಜೆಪಿಗೆ ಅನುಕೂಲ ಮಾಡಿಕೊಡಲಿದೆ. ಯೋಗಿ ಅವರಿಗೆ ಚಾರ್ಮ್ ಮತ್ತು ಪ್ಯಾನ್-ಇಂಡಿಯಾ ಇಮೇಜ್ ಇದೆ ಅದು ಕರ್ನಾಟಕದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇವಲ ಯೋಗಿ ಆದಿತ್ಯನಾಥ್ ಅವರ ಭಾಷಣಗಳು ಮಾತ್ರವಲ್ಲ,  ಅವರ ಅಭಿವೃದ್ಧಿ ಕಾರ್ಯತಂತ್ರಗಳು 2022 ರ ಯುಪಿ ಚುನಾವಣೆಯಲ್ಲಿ ಪಕ್ಷದ ಶಾಸಕರ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡಿತು. ಕರ್ನಾಟಕದಲ್ಲಿ, ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ, ಕರ್ನಾಟಕದಲ್ಲಿ ತನ್ನ ಮತಗಳನ್ನು ಉಳಿಸಿಕೊಳ್ಳುವ ಬಗ್ಗೆ ಬಿಜೆಪಿಗೆ ಖಚಿತವಿಲ್ಲ ಎಂದು ಮೂಲಗಳು ತಿಳಿಸಿವೆ.

ಜನರು ಯೋಗಿ ಅವರಿಂದ ಸ್ಫೂರ್ತಿ ಪಡೆದು ಪ್ರಭಾವಿತರಾಗಿದ್ದಾರೆ, ಅವರನ್ನು ಆಹ್ವಾನಿಸುವಂತೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಬೇಡಿಕೆ ಇದೆ, ಹೀಗಾಗಿ ಅವರು ಬರುತ್ತಾರೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್ಸಿ ಎನ್ ರವಿಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT