ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ 
ರಾಜ್ಯ

ಮಂಡ್ಯ ಮೂಲದ ಯುವಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ: 12 ಮಂದಿ ವಿರುದ್ಧ ಹುಬ್ಬಳ್ಳಿಯಲ್ಲಿ ದೂರು ದಾಖಲು

ಮಂಡ್ಯ ಮೂಲದ 26 ವರ್ಷದ ಹಿಂದು ಯುವಕನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ 12 ಜನರ ವಿರುದ್ಧ ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ.

ಹುಬ್ಬಳ್ಳಿ: ಮಂಡ್ಯ ಮೂಲದ 26 ವರ್ಷದ ಹಿಂದು ಯುವಕನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ 12 ಜನರ ವಿರುದ್ಧ ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ.

ಮಂಡ್ಯ ಮೂಲದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ಶ್ರೀಧರ ದೂರು ನೀಡಿದ್ದಾರೆ.

ಎಫ್ಐಆರ್'ನಲ್ಲಿ ಏನಿದೆ: 
ಕಳೆದ ಮೇ ತಿಂಗಳಿನಲ್ಲಿ ಶ್ರೀಧರ ಅವರನ್ನು ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಅಲ್ಲಿನ ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರು. ನಂತರ ಅವರಿಗೆ ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ಮರ್ಮಾಂಗದ ತುದಿ ಕತ್ತರಿಸಿದ್ದಾರೆ. ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಲ್ಲದೆ, ಮತಾಂತರದ ಬಗ್ಗೆ ಬಾಂಡ್ ಪೇಪರ್'ನಲ್ಲಿ ಸಹಿ‌ ಪಡೆದಿದ್ದಾರೆ. ಅಲ್ಲಿಂದ ತಿರುಪತಿಗೆ ಕರೆದೊಯ್ದು, ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿದ್ದಾರೆ.

ಪ್ರತಿವರ್ಷ ಮೂವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಬೇಕೆಂದು ಆರೋಪಿಗಳು ಶ್ರೀಧರ ಅವರಿಗೆ ಬೆದರಿಸಿದ್ದಾರೆ. ಅವರ ಕೈಯ್ಯಲ್ಲಿ ಪಿಸ್ತೂಲ್ ಹಿಡಿಸಿ ಫೋಟೊ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಭಯೋತ್ಪಾದಕನೆಂದು ಬಿಂಬಿಸುವುದಾಗಿ ಹೆದರಿಸಿದ್ದಾರೆ. ನಂತರ ಅವರ ಬ್ಯಾಂಕ್ ಖಾತೆಗೆ 35 ಸಾವಿರ ರೂ. ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ.

ಶ್ರೀಧರ ಅವರು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸೆ. 21ರಂದು ಹುಬ್ಬಳ್ಳಿಯ ಬೈರಿದೇವರಕೊಪ್ಪಕ್ಕೆ ಬಂದಾಗ, ಅಪರಿಚಿತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಿಮ್ಸ್'ನಲ್ಲಿ ಚಿಕಿತ್ಸೆ ಪಡೆದ ಅವರು, ಈ ಹಿಂದಿನ ಘಟನೆಯಿಂದ ಬೇಸತ್ತು ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT