ರಾಜ್ಯ

ಮ್ಯಾನ್ಮಾರ್‌ನಲ್ಲಿ ಬಂಡುಕೋರರ ಒತ್ತೆಯಾಳಾಗಿರುವ ಕರ್ನಾಟಕದ ವ್ಯಕ್ತಿ: ವಿವರ ಕೇಳಿದ ರಾಜ್ಯ ಸರ್ಕಾರ

ಕೆಲವು ನೇಮಕಾತಿ ಏಜೆನ್ಸಿಗಳು ಯುವಕರಿಗೆ ಥೈಲ್ಯಾಂಡ್‌ನಲ್ಲಿ ಉದ್ಯೋಗ ನೀಡುವುದಾಗಿ ಹೇಳಿ ವಂಚಿಸುತ್ತಿವೆ. ಯುವಕರನ್ನು ಬಲವಂತವಾಗಿ ಮ್ಯಾನ್ಮಾರ್‌ಗೆ ಕರೆದೊಯ್ಯಲಾಗಿದೆ ಮತ್ತು ಸೈಬರ್ ಅಪರಾಧಿಗಳಾಗಿ ಕೆಲಸ ಮಾಡಲು ಒತ್ತಾಯಿಸಲಾಗಿದೆ.

ಬೆಂಗಳೂರು: ಮ್ಯಾನ್ಮಾರ್‌ನಲ್ಲಿ ಬಂಡುಕೋರರ ಒತ್ತೆಯಾಳಾಗಿರುವ ಅನೇಕ ಭಾರತೀಯರ ಪೈಕಿ ಕರ್ನಾಟಕದ ವ್ಯಕ್ತಿಯೊಬ್ಬರಿರುವ ಕುರಿತಾದ ವರದಿಗಳ ಬೆನ್ನಲ್ಲೇ ಅಗತ್ಯ ವಿವರಗಳನ್ನು ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರದೊಂದಿಗೆ ಸಮನ್ವಯ ಸಾಧಿಸಲಿದ್ದಾರೆ.

ಈ ಬಗ್ಗೆ ವಿವರಗಳನ್ನು ಪಡೆಯಲು ರಾಜ್ಯದ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ತೆಲಂಗಾಣದ ಅನೇಕರು ಸೇರಿದಂತೆ ಸುಮಾರು 500 ಭಾರತೀಯರು ಮ್ಯಾನ್ಮಾರ್‌ನಲ್ಲಿ ಬಂಡುಕೋರರ ವಶದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲವು ನೇಮಕಾತಿ ಏಜೆನ್ಸಿಗಳು ಯುವಕರಿಗೆ ಥೈಲ್ಯಾಂಡ್‌ನಲ್ಲಿ ಉದ್ಯೋಗ ನೀಡುವುದಾಗಿ ಹೇಳಿ ವಂಚಿಸುತ್ತಿವೆ. ಯುವಕರನ್ನು ಬಲವಂತವಾಗಿ ಮ್ಯಾನ್ಮಾರ್‌ಗೆ ಕರೆದೊಯ್ಯಲಾಗಿದೆ ಮತ್ತು ಸೈಬರ್ ಅಪರಾಧಿಗಳಾಗಿ ಕೆಲಸ ಮಾಡಲು ಒತ್ತಾಯಿಸಲಾಗಿದೆ.

ಬಂಡುಕೋರರಿಂದ ಒತ್ತೆಯಾಳುಗಳಾಗಿದ್ದವರಲ್ಲಿ ಹೆಚ್ಚಿನವರು ಕೇರಳ ಮತ್ತು ತಮಿಳುನಾಡಿನವರಾಗಿದ್ದರೆ, ಕರ್ನಾಟಕದ ಒಬ್ಬರೂ ಸಹ ಸೆರೆಯಲ್ಲಿದ್ದಾರೆ ಎಂಬ ವರದಿಗಳಿವೆ. ಆದರೆ, ಆ ವ್ಯಕ್ತಿಯ ಗುರುತು ಅಥವಾ ರಾಜ್ಯದಲ್ಲಿ ಆತನ ಸ್ಥಾನದ ಬಗ್ಗೆ ರಾಜ್ಯ ಸರ್ಕಾರದ ಬಳಿ ಯಾವುದೇ ಮಾಹಿತಿಯಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?