ದರಸಾ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ 
ರಾಜ್ಯ

ದುಷ್ಟ ಸಂಹಾರ, ಶಿಷ್ಟ ಪಾಲನೆ ನಾಡಹಬ್ಬದ ಆಶಯ; ರಾಷ್ಟ್ರಪತಿಗಳು ದಸರಾ ಉದ್ಘಾಟನೆ ಮಾಡಿದ್ದು ಸಂತಸ ತಂದಿದೆ: ಸಿಎಂ ಬೊಮ್ಮಾಯಿ

ನಾಡದೇವತೆ ಚಾಮುಂಡೇಶ್ವರಿ ಅಗ್ರಪೂಜೆಯೊಂದಿಗೆ ದೇಶದ ಮೊದಲ ಪ್ರಜೆ ದ್ರೌಪದಿ ಮುರ್ಮು ಅವರು ದಸರಾಗೆ ಚಾಲನೆ ನೀಡಿದ್ದಾರೆ. ರಾಷ್ಟ್ರಪತಿಗಳಾದ ನಂತರ ಅವರು ಭಾರತದಲ್ಲಿ ಕರ್ನಾಟಕ ರಾಜ್ಯಕ್ಕೆ ಮೊದಲ ಭೇಟಿ ನೀಡಿದ್ದು, ಅದರಲ್ಲೂ ದಸರಾ ಉದ್ಘಾಟನೆಗೆ ಬಂದಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಅಗ್ರಪೂಜೆಯೊಂದಿಗೆ ದೇಶದ ಮೊದಲ ಪ್ರಜೆ ದ್ರೌಪದಿ ಮುರ್ಮು ಅವರು ದಸರಾಗೆ ಚಾಲನೆ ನೀಡಿದ್ದಾರೆ. ರಾಷ್ಟ್ರಪತಿಗಳಾದ ನಂತರ ಅವರು ಭಾರತದಲ್ಲಿ ಕರ್ನಾಟಕ ರಾಜ್ಯಕ್ಕೆ ಮೊದಲ ಭೇಟಿ ನೀಡಿದ್ದು, ಅದರಲ್ಲೂ ದಸರಾ ಉದ್ಘಾಟನೆಗೆ ಬಂದಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಮೈಸೂರು ನಾಡದೇವತೆ ಚಾಮುಂಡೇಶ್ವರಿಗೆ ರಾಷ್ಟ್ರಪತಿಗಳು ಹಾಗೂ ಇತರ ಗಣ್ಯರೊಂದಿಗೆ ಪೂಜೆ ನೆರವೇರಿಸಿ ಪುಷ್ಪಾರ್ಚನೆ ಸಲ್ಲಿಸಿದ ನಂತರ ವೇದಿಕೆಯಲ್ಲಿ ಭಾಷಣ ಮಾಡಿದರು. ರಾಷ್ಟ್ರಪತಿ ದಸರಾ ಉದ್ಘಾಟನೆಗೆ ಬಂದಿದ್ದು ಸಂತಸ ತಂದಿದೆ ಎಂದು ದ್ರೌಪದಿ ಮುರ್ಮು ಅವರಿಗೆ ಧನ್ಯವಾದ ತಿಳಿಸಿದರು. 

ಗತವೈಭವ ನೆನಪಿಸಿಕೊಳ್ಳುವಂತೆ ಈ ಬಾರಿ ದಸರಾ ಮಹೋತ್ಸವ ಆಚರಿಸುತ್ತಿದ್ದೇವೆ. 10 ದಿನಗಳ ಕಾರ್ಯಕ್ರಮ ಒಂದು ನಾಡಹಬ್ಬ. ನಮ್ಮ ನಾಡಿನ ದುಡಿಯುವ ರೈತರು, ಕಾರ್ಮಿಕರು, ಸಾಮಾನ್ಯ ಜನರು ಮನೆಮನೆಗಳಲ್ಲಿ ನಾಡಹಬ್ಬ ಆಚರಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ನಾಡನ್ನು ಸಮೃದ್ಧಿಯಾಗಿಡಲು ನಾವು ಪ್ರಾರ್ಥಿಸುತ್ತೇವೆ. ದೇವಿ ನಮ್ಮ ಪ್ರಾರ್ಥನೆಗೆ ಓಗೊಟ್ಟು ನಮಗೆ ಆಶೀರ್ವಾದ, ಶಕ್ತಿ ಕೊಡುತ್ತಾಳೆ. ಇದು ನಮ್ಮ ಸೌಭಾಗ್ಯ. ಚಾಮುಂಡಿ ಬೆಟ್ಟದಲ್ಲಿ ಇವತ್ತು ಸ್ಥಾಪನೆಯಾಗಿರುವ ತಾಯಿಯ ಶಕ್ತಿಪೀಠವು ನಾಡಿಗೆ ಶಕ್ತಿ ಕೊಡುವ ಒಂದು ಸಂಚಲನವನ್ನು ಉಂಟು ಮಾಡಿದೆ. ಮೈಸೂರು ಮಹಾರಾಜರ ಕಾಲದಿಂದ ದೇವಿಯ ಪೂಜೆಯನ್ನು ಪ್ರಜಾಪ್ರಭುತ್ವ ಬಂದ ಮೇಲೆ ಮುಂದುವರಿಸಿಕೊಂಡು ಹೋಗಿದ್ದೇವೆ. ಗತಕಾಲದ ವೈಭವದ ಜೊತೆಗೆ ಇಂದಿನ ಪ್ರಸ್ತುತ ಕಾಲದ ಸಮಗ್ರ ಕನ್ನಡ ನಾಡಿನ ಶ್ರೇಯೋಭಿವೃದ್ಧಿಯೂ ಅಷ್ಟೇ ಮುಖ್ಯ. ಹತ್ತು ಹಲವು ನೈಸರ್ಗಿಕ ಸವಾಲುಗಳನ್ನು ಎದುರಿಸಿ ಜನಕಲ್ಯಾಣದ ಕಡೆಗೆ ದಾಪುಗಾಲು ಹಾಕುತ್ತಿದ್ದೇವೆ ಎಂದರು.

ನಾವು ಆಹ್ವಾನಿಸಿದ ತಕ್ಷಣ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಕೊಂಡರು. ದೇಶದ ಶ್ರೇಯೋಭಿವೃದ್ಧಿಗೆ ಅವರು ಚಾಮುಂಡೇಶ್ವರಿಗೆ ನಮನ ಸಲ್ಲಿಸಿದರು. ಅವರಿಗೆ ದೈವಭಕ್ತಿಯಿದೆ. ದುಷ್ಟರ ಸಂಹಾರ-ಶಿಷ್ಟರ ಪಾಲನೆ ನಾಡಹಬ್ಬದ ಆಶಯ. ಇವತ್ತು ಮಹಿಶಾಸುರ ಇಲ್ಲ. ಆದರೆ ನಮ್ಮೊಳಗಿರುವ ದುರ್ಗುಣಗಳನ್ನು ದೂರ ಇಡಬೇಕು. ಒಳ್ಳೆಯ ವಿಚಾರಗಳಿಗೆ ಪುರಸ್ಕಾರ ಕೊಟ್ಟು ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡಬೇಕು. ಆ ಸಂಕಲ್ಪದೊಂದಿಗೆ ನಾವು ಮುಂದೆ ಹೆಜ್ಜೆ ಹಾಕುತ್ತಿದ್ದೇವೆ. 

ತಾಯಿ ಚಾಮುಂಡೇಶ್ವರಿ ಇವತ್ತು ಹಂಸ ಏರಿದ್ದಾಳೆ. ಹಂಸವೆಂದರೆ ಶುದ್ಧ ಎಂದು ಅರ್ಥ. ಅದು ಅತ್ಯಂತ ದೊಡ್ಡ ಹಾಗೂ ತೂಕದ ಪಕ್ಷಿ. ಆದರೂ ಅತ್ಯಂತ ಎತ್ತರಕ್ಕೆ ಹಾರಬಲ್ಲದು. ಹಿಮಾಲಯ, ಮಾನಸ ಸರೋವರಗಳಲ್ಲಿ ಅದು ಸಂಚರಿಸುತ್ತದೆ. ವಿಚಾರಗಳಲ್ಲಿ ಶುದ್ಧತೆ, ತೂಕದ ನಡವಳಿಕೆ ಮತ್ತು ಎತ್ತರದ ಚಿಂತನೆಗಳಿದ್ದರೆ, ಭಾವನೆಗಳಿದ್ದರೆ, ಶುದ್ಧ ಮನಸ್ಸು ಇದ್ದರೆ ಮಾನಸ ಸರೋವರದ ಎತ್ತರ ಮುಟ್ಟಬಹುದು ಎಂಬುದನ್ನು ಇದು ಸೂಚಿಸುತ್ತದೆ.

ಕನ್ನಡ ನಾಡನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಎಲ್ಲ ರೀತಿಯಲ್ಲಿಯೂ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇವೆ. ಈ ವರ್ಷ ಕೊವಿಡ್​ನಂಥ ಆತಂಕಗಳಿಂದ ನಾಡನ್ನು ದೂರ ಇರಿಸಿ, ನಾಡನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಆಶೀರ್ವಾದ ಮಾಡಲಿ ಎಂದು ಶಕ್ತಿ ದೇವತೆಯನ್ನು ಪ್ರಾರ್ಥಿಸುತ್ತೇನೆ. ರಾಷ್ಟ್ರಪತಿಗೆ ಸಮಸ್ತ ಕನ್ನಡ ನಾಡಿನ 6 ಕೋಟಿ ಜನರ ಪರವಾಗಿ ಕೃತಜ್ಞತೆ ಅರ್ಪಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT