ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 137 ಸೇರಿ ರಾಜ್ಯದಲ್ಲಿ 195 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ195 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,833ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ195 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,833ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40239 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 137 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1871417ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 365 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4020540ಕ್ಕೆ ಏರಿಕೆಯಾಗಿದೆ. ಇನ್ನು 3012 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್, ಸರ್ವನಾಶದ ಸುಳಿವು..!

ಅಮೆರಿಕಾ–ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?

​ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ

ಡಿಲಿಮಿಟೇಶನ್ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಧ್ವನಿ ಕುಗ್ಗಿಸುವ ಯತ್ನ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

SCROLL FOR NEXT