ಪೊಲೀಸರು (ಸಂಗ್ರಹ ಚಿತ್ರ) 
ರಾಜ್ಯ

SDPI, PFI ಗೆ ಮತ್ತೆ ಶಾಕ್: ರಾಜ್ಯಾದ್ಯಂತ ಮುಖಂಡರ ಮನೆ ಮೇಲೆ ದಾಳಿ; 40ಕ್ಕೂ ಹೆಚ್ಚು ಮಂದಿ ವಶಕ್ಕೆ

ರಾಜ್ಯದಲ್ಲಿ SDPI, PFI ಸಂಘಟನೆಗಳ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆಯೇ ದಾಳಿಗಿಳಿದ ಪೊಲೀಸರು ಪಿಎಫ್ಐ ಮತ್ತು ಎಸ್ ಡಿಪಿಐಗೆ ಸೇರಿದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ SDPI, PFI ಸಂಘಟನೆಗಳ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆಯೇ ದಾಳಿಗಿಳಿದ ಪೊಲೀಸರು ಪಿಎಫ್ಐ ಮತ್ತು ಎಸ್ ಡಿಪಿಐಗೆ ಸೇರಿದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ವಾರ ರಾಷ್ಟ್ರೀಯ ತನಿಖಾ ದಳ(NIA) ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ನಾಯಕರನ್ನು ಬಂಧಿಸಿತ್ತು. ಈಗ ರಾಜ್ಯಾದ್ಯಂತ ಕರ್ನಾಟಕ ಪೊಲೀಸರು ಪಿಎಫ್‌ಐ ಮತ್ತು ಎಸ್‌ಡಿಪಿಐಗೆ(SDPI) ಶಾಕ್‌ ನೀಡಿದ್ದು, ಮುಸ್ಲಿಂ ಸಂಘಟನೆಗಳ ನಾಯಕರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಬೀದರ್, ಚಿತ್ರದುರ್ಗ, ಬಾಗಲಕೋಟೆ ಮತ್ತು ಚಾಮರಾಜನಗರದಲ್ಲಿನ ಪಿಎಫ್ಐ ಮತ್ತು ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 

ಈ ನಾಲ್ಕು ಜಿಲ್ಲೆಗಳು ಮಾತ್ರವಲ್ಲದೇ ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಕೋಲಾರ, ಮೈಸೂರಿನಲ್ಲೂ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಬಿದರ್‌ನಿಂದ ಚಾಮರಾಜನಗರದವರೆಗೆ ದಾಳಿ ನಡೆಸಿ 40ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.   

ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಆಯಾ ಜಿಲ್ಲೆಗಳ ಎಸ್‌ಪಿ ಹಾಗೂ ಕಮಿಷನರ್‌ಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ವಶಕ್ಕೆ ಪಡೆದವರು ಪಿಎಫ್ಐ ಪ್ರತಿಭಟನೆ ಹಾಗೂ ಪಿಎಫ್ಐಗೆ ಸೇರಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದರು. ಇದರ ಜೊತೆ ಇವರು ಭಾರೀ ಫಂಡಿಂಗ್ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬೀದರ್‌ನಲ್ಲಿ ಪಿಎಫ್‍ಐ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಂ, ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಶೇಕ್ ಮಕ್ಸೂದ್ ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ ಪಿಎಫ್‍ಐ ಮುಖಂಡ ಅಫನ್ ಅಲಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಅಂತೆಯೇ ಬಾಗಲಕೋಟೆಯಲ್ಲಿ 6 ಪಿಎಫ್‍ಐ ಕಾರ್ಯಕರ್ತರು, ಚಾಮರಾಜನಗರದಲ್ಲಿ ಪಿಎಫ್‍ಐ ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!