ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 186 ಸೇರಿ ರಾಜ್ಯದಲ್ಲಿ 249 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,887ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,887ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40239 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 186 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1871466ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 501 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4021041ಕ್ಕೆ ಏರಿಕೆಯಾಗಿದೆ. ಇನ್ನು 2565 ಸಕ್ರಿಯ ಪ್ರಕರಣಗಳಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.