ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 160 ಸೇರಿ ರಾಜ್ಯದಲ್ಲಿ 264 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 264 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,64,346ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 264 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,64,346ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು. ಇದರೊಂದಿಗೆ ಸಾವಿನ ಸಂಖ್ಯೆ 40,240ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 160 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,71,763ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 279 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,21,320ಕ್ಕೆ ಏರಿಕೆಯಾಗಿದೆ. ಇನ್ನು 2,744 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video