ರಾಷ್ಟ್ರಪತಿಗಳಿಗೆ ಬೀಳ್ಕೋಡುಗೆ 
ರಾಜ್ಯ

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆತ್ಮೀಯ ಬೀಳ್ಕೊಡುಗೆ

ಕಳೆದ ಮೂರು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದ  ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರನ್ನು ಇಂದು ಬೆಳ್ಳಗ್ಗೆ  ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೆಚ್‌ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಬೆಂಗಳೂರು:  ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಕಳೆದ ಮೂರು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದ  ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರನ್ನು ಇಂದು ಬೆಳ್ಳಗ್ಗೆ  ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೆಚ್‌ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಮೈಸೂರು ದಸರಾ, ಧಾರಾವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಅಂಡ್ ಟೆಕ್ನಾಲಜಿಯನ್ನು ಉದ್ಘಾಟಿಸಿದರು ಹಾಗೂ ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿದರು.

ಬೆಂಗಳೂರಿನ ಹೆಚ್.ಎ.ಎಲ್ ನಲ್ಲಿ ಕ್ರಯೋಜನಿಕ್ ಪ್ರತ್ಯೇಕ ಘಟಕ ಹಾಗೂ ವರ್ಚುವಲ್ ಕಾರ್ಯಕ್ರಮದ ಮೂಲಕ ನ್ಯಾಷನಲ್ ಇನಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರದ ದಕ್ಷಿಣವಲಯ ಸಂಶೋಧನಾ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ನಗರದ ನೂತನ  ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವನ್ನು ಸಹ ಉದ್ಘಾಟಿಸಿದರು.

ಸೆಪ್ಟೆಂಬರ್ ೨೭ ರಂದು ರಾಜ್ಯ ಸರ್ಕಾರದಿಂದ ನಾಗರಿಕ ಸನ್ಮಾನವನ್ನು ಸ್ವೀಕರಿಸಿದ ರಾಷ್ಟ್ರಪತಿ ಅವರಿಗೆ  ಅಂದು ರಾತ್ರಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ಸಹ ಏರ್ಪಡಿಸಲಾಗಿತ್ತು. ಕಳೆದ ಮೂರು ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ  ಭಾಗವಹಿಸಿದ ರಾಷ್ಟ್ರಪತಿಗಳು ರಾಜ್ಯ ಪ್ರವಾಸ ಮುಗಿಸಿ ಇಂದು ನವದೆಹಲಿಗೆ ಪ್ರಯಾಣಿಸಿದರು.

ಈ ಸಮಯದಲ್ಲಿ ಬೃಹತ್ ಕೈಗಾರಿಕಾ ಸಚಿವರಾದ ಮುರಗೇಶ್ ನಿರಾಣಿ , ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಭೂ ಸೇನಾ ಅಧಿಕಾರಿ ಬಸಂತ್ ರೆಪ್ಸ್  ಪಾಲ್, ನೌಕಾ ಸೇನಾಧಿಕಾರಿ ರೂಪನ್ ಬೆಂಬೇ, ರಾಜ್ಯ ಪೊಲೀಸ್ ಮಹಾ  ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ  ಹಿರಿಯ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!