ಸಾಂಕೇತಿಕ ಚಿತ್ರ 
ರಾಜ್ಯ

ಹುಬ್ಬಳ್ಳಿಯಲ್ಲಿ ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಯುವಕನ ಮತಾಂತರ: ಪೊಲೀಸರಿಗೆ ರಾಜ್ಯಾದ್ಯಂತ ಬೃಹತ್ ಜಾಲದ ಶಂಕೆ

ಕೆಲ ತಿಂಗಳ ಹಿಂದೆ ಮಂಡ್ಯ ಮೂಲದ 26 ವರ್ಷದ ಯುವಕನೊಬ್ಬನನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಪ್ರಕರಣದ ತನಿಖೆಯು ಕರ್ನಾಟಕದಲ್ಲಿ ಧಾರ್ಮಿಕ ಮತಾಂತರದಲ್ಲಿ ತೊಡಗಿಸಿಕೊಂಡಿರುವ ವಿವಿಧ ಗುಂಪುಗಳ ನಂಟು ಕುರಿತು ಹೊಸ ಒಳನೋಟಗಳನ್ನು ಹೊರತರುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ಮಂಡ್ಯ ಮೂಲದ 26 ವರ್ಷದ ಯುವಕನೊಬ್ಬನನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಪ್ರಕರಣದ ತನಿಖೆಯು ಕರ್ನಾಟಕದಲ್ಲಿ ಧಾರ್ಮಿಕ ಮತಾಂತರದಲ್ಲಿ ತೊಡಗಿಸಿಕೊಂಡಿರುವ ವಿವಿಧ ಗುಂಪುಗಳ ನಂಟು ಕುರಿತು ಹೊಸ ಒಳನೋಟಗಳನ್ನು ಹೊರತರುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯ ಪೊಲೀಸರು ಕೆಲವರನ್ನು ವಿಚಾರಣೆ ನಡೆಸುತ್ತಿದ್ದು, ನಿನ್ನೆ ಕಸಬಾಪೇಟೆಯ ಕೆಲ ಮನೆಗಳಿಗೆ ಭೇಟಿ ನೀಡಿದ್ದಾರೆ. ಎಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ರಾಜ್ಯದ ವಿವಿಧೆಡೆ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸುತ್ತಿದೆ. ಹುಬ್ಬಳ್ಳಿಯ ಎಪಿಎಂಸಿ-ನವನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 12 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಮಂಡ್ಯ ಮೂಲದ ಖಾಸಗಿ ಸಂಸ್ಥೆಯ ಉದ್ಯೋಗಿ ಶ್ರೀಧರ್ ಗಂಗಾಧರ್ ಎಂಬಾತನನ್ನು ವಂಚಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಯುವಕ ಪೊಲೀಸರ ಬಳಿ ಹೋಗಿ ದೂರು ನೀಡಿದರೆ ಅಥವಾ ಬೇರೆಯವರಲ್ಲಿ ಹೇಳಿಕೊಂಡರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಯಿತು. ಶ್ರೀಧರ್ ಅವರನ್ನು ಬೆಂಗಳೂರಿನ ಮನೆಯೊಂದರಲ್ಲಿ ಬಂಧಿಸಿ ಬಲವಂತವಾಗಿ ಸುನ್ನತಿ ಮಾಡಿಸಿ ಗೋಮಾಂಸ ತಿನ್ನುವಂತೆ ಮಾಡಲಾಗಿತ್ತು. ಹೆಚ್ಚಿನ ಆರೋಪಿಗಳು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಂತ್ರಸ್ತ ಯುವಕನಿಂದ ಆರೋಪಿಗಳು ಮತ್ತು ಅವರ ಸಹಚರರ ಬಗ್ಗೆ ಸಾಕಷ್ಟು ಮಾಹಿತಿ, ದೂರವಾಣಿ ಸಂಖ್ಯೆಗಳು ಮತ್ತು ವಿಳಾಸಗಳನ್ನು ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಬಳಸುವ ವಸ್ತುಗಳು ಹಾಗೂ ಹುಬ್ಬಳ್ಳಿಯ ಕೆಲವು ಜನರ ಬಗ್ಗೆ ನಮಗೆ ಮಾಹಿತಿ ಇತ್ತು. ಪ್ರಮುಖ ಆರೋಪಿಯೊಬ್ಬ ಹುಬ್ಬಳ್ಳಿಯವನು. ಆತನ ಸುಳಿವಿನ ನಂತರ ಕಸಬಾಪೇಟೆಯ ಕೆಲವು ಮನೆಗಳಲ್ಲಿ ಹುಡುಕಾಟ ನಡೆಸಿದೆವು. ಇದು ವಾಡಿಕೆಯ ತನಿಖಾ ಪ್ರಕ್ರಿಯೆಯಾಗಿದೆ ಮತ್ತು ಇಲ್ಲಿಯವರೆಗೆ ಯಾವುದೇ ಬಂಧನಗಳನ್ನು ಮಾಡಲಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

ಸಂತ್ರಸ್ತ ಯುವಕನಿಗೆ  ಹಣ ನೀಡಿರುವ ಬಗ್ಗೆ ಹಣದ ಮೂಲಗಳು ಮತ್ತು ಬ್ಯಾಂಕ್ ಖಾತೆಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬ ಯುವಕನಿಗೆ 35 ಸಾವಿರ ರೂಪಾಯಿಗಳನ್ನು ನೀಡಿದ್ದು, ಮತಾಂತರಗೊಂಡ ಪ್ರತಿಯೊಬ್ಬ ವ್ಯಕ್ತಿಗೆ 40 ಸಾವಿರ ರೂಪಾಯಿ ನೀಡುತ್ತಾರೆ. ಸಂತ್ರಸ್ತನಿಗೆ ಬಂದೂಕು ಬೆದರಿಕೆ ತೋರಿಸಿ ಮತಾಂತರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT