ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶೀಘ್ರವೇ 1,051 ರಸ್ತೆ ಗುಂಡಿ ಮುಚ್ಚಲು ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, "ಬೆಂಗಳೂರಿನ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸಂಚಾರಿ ಪೊಲೀಸ್ ಇಲಾಖೆಯಿಂದ 4,545 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದೆ. ಈ ಪೈಕಿ 1,051 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ. ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪಾಲಿಕೆ ವತಿಯಿಂದ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಬೇಕು" ಎಂದರು.

ಬೆಂಗಳೂರಿನ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸಂಚಾರಿ ಪೊಲೀಸ್ ವಿಭಾಗದಿಂದ ಗುರುತಿಸಿದ್ದ ರಸ್ತೆಗುಂಡಿಗಳ ಪೈಕಿ ಬಾಕಿ 1,051 ರಸ್ತೆ ಗುಂಡಿಗಳನ್ನು ಜಂಟಿ ಕಾರ್ಯಾಚರಣೆ ನಡೆಸಿ ತ್ವರಿತವಾಗಿ ಮುಚ್ಚಲು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದಿನ ಸಭೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಧಿಕಾರಿಗಳನ್ನು ಆಹ್ವಾನಿಸಲು ಹೇಳಿದರು. ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ 8 ಜಂಕ್ಷನ್, ಸಿಲ್ಕ್ ಬೋರ್ಡ್ ಜಂಕ್ಷನ್, ಜಯದೇವ ಜಂಕ್ಷನ್,  ಎಂ.ಎಂ.ಟೆಂಪಲ್ ಜಂಕ್ಷನ್ (ಟಿನ್ ಪ್ಯಾಕ್ಟರಿ),  ಹೆಬ್ಬಾಳ ಜಂಕ್ಷನ್,  ಗೊರಗುಂಟೆಪಾಳ್ಯ ಜಂಕ್ಷನ್,  ಸಾರಕ್ಕಿ ಜಂಕ್ಷನ್,  ಕೆ.ಎಸ್.ಲೇಔಟ್ ಜಂಕ್ಷನ್, ಬನಶಂಕರಿ ಜಂಕ್ಷನ್ ಗಳಲ್ಲಿ ತೆಗದುಕೊಳ್ಳಬೇಕಿರುವ ಬಾಕಿ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು" ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT