ಆರಗ ಜ್ಞಾನೇಂದ್ರ 
ರಾಜ್ಯ

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ರಾಜ್ಯದ ಬೆಳೆಗಾರರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು,  ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆ ಮಾತ್ರ ಅನುಮತಿ ನೀಡಲಾಗಿದೆ, ಎಂದಿದ್ದಾರೆ. ನೆರೆಯ ಭೂತಾನ್ ದೇಶ, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂಬುದನ್ನು ಸಚಿವರು ನೆನಪಿಸಿದ್ದಾರೆ. 

ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು,  ಬೆಳೆಗಾರರುಯಾವುದೇ ಗೊಂದಲ, ಆತಂಕಕ್ಕೊಳಗಾಗುವುದು ಬೇಡ ಎಂದು ಅಭಯ ನೀಡಿದ್ದಾರೆ. ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT