ಮುರುಘಾ ಶ್ರೀ 
ರಾಜ್ಯ

ಮಠದ ಸಿಬ್ಬಂದಿಗೆ ವೇತನ: ಚೆಕ್ ಗಳಿಗೆ ಸಹಿ ಹಾಕಲು ಮುರುಘಾ ಶ್ರೀ ಗೆ ಹೈಕೋರ್ಟ್ ಅನುಮತಿ​

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಹೈಕೋರ್ಟ್...

ಬೆಂಗಳೂರು: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ವೇತನಕ್ಕಾಗಿ ಕಾಯುತ್ತಿದ್ದ ಮಠದ ಮೂರು ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ಮಠದ ಸಿಬ್ಬಂದಿಗೆ ವೇತನ ಮತ್ತು ಇತರೆ ದೈನಂದಿನ ವೆಚ್ಚಗಳಿಗೆ ಸಂಬಂಧಿಸಿದ ಚೆಕ್ ಗಳಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. 

ಮುರುಘಾ ಶ್ರೀಗಳು ವೇತನಕ್ಕೆ ಸಂಬಂಧಿಸಿದ ಚೆಕ್​ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್​ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ಹಾಕುವ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು ಎಂದು ಹೈಕೋರ್ಟ್ ಹೇಳಿದೆ.

ಅಕ್ಟೋಬರ್ ತಿಂಗಳಿಗೆ ಮಾತ್ರ ಈ ಆದೇಶ ಅನ್ವಯ. ವೇತನವಿಲ್ಲದೆ ವಿದ್ಯಾಪೀಠದ ಸಿಬ್ಬಂದಿ ಉಪವಾಸ ಇರಬಾರದು ಎಂದು ಮಾನವೀಯ ನೆಲೆಗಟ್ಟಿನಲ್ಲಿ ಅನುಮತಿಸಲಾಗಿದೆ. ಇನ್ನಿತರ ಮನವಿಗಳ ಬಗ್ಗೆ ವಿಚಾರಣಾ ನ್ಯಾಯಾಲಯವೇ ನಿರ್ಧರಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ