ರಾಜ್ಯ

ಒತ್ತುವರಿ ತೆರವಿಗೆ ಆಕ್ಷೇಪ ವ್ಯಕ್ತಪಡಿಸಿದ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಲಾಠಿ ಚಾರ್ಜ್: ಹಲವರಿಗೆ ಗಾಯ

Manjula VN

ತುಮಕುರು: ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ಮುಂದಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರ ಮೇಲೆ ಅರಣ್ಯಾಧಿಕಾರಿಗಳು ಲಾಠಿಚಾರ್ಜ್ ಮಾಡಿರುವ ಘಟನೆ ಗುಬ್ಬು ತಾಲೂಗಿನ ಗಂಗಯ್ಯನಪಾಳ್ಯದಲ್ಲಿ ಗುರುವಾರ ಸಂಜೆ ನಡೆದಿದೆ.

ಬಗರ್ ಹುಕುಂ ಭೂಮಿಯಲ್ಲಿ ಟ್ರಂಚ್ ಹೊಡೆಯಲು ಅರಣ್ಯ ಇಲಾಖೆಯ ಸಿಬ್ಬಂದಿಗಲು ಮೂಂದಾಗಿದ್ದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಜೊತೆ ಬಂದಿದ್ದ ಅಧಿಕಾರಿಗಳು ಟ್ರಂಚ್ ಹೊಡೆಯಲು ಮುಂದಾಗಿದ್ದರು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ರೈತರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ.

ಅಧಿಕಾರಿಗಳ ನಡೆಗೆ ವಿರೋಧ ವ್ಯಕ್ತಪಡಿಸಿದ ರೈತರು, ಸ್ಥಳದಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿಗಳು ರೈತಲ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಕೆಲ ರೈತರಿಗೆ ಹಾಗೂ ಅರಣ್ಯ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ದೊಡ್ಡ ಗಂಗಯ್ಯ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ದೇವೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರಂದು ತಿಳಿದುಬಂದಿದೆ.

ಈ ನಡವೆ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತ ಸಂಘಟೆಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಅರಣ್ಯ ಸಿಬ್ಬಂದಿ ಹಾಗೂ ಆರ್'ಎಫ್ಒ ದುಗ್ಗಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
 
ಕಲ್ಲು ತೂರಾಟ ನಡೆಸಿದ ರೈತರು, ಟ್ರಂಚ್ ಹೊಡೆಯಲು ತಂದಿದ್ದ ಯಂತ್ರವನ್ನೂ ನಾಶಪಡಿಸಿದರು ಎಂದು ಅರಣ್ಯ ಇಲಾಖೆಯ ಸಿಬ್ಬಂದಿಗಳು ಆರೋಪಿಸಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ ಮಾಲಗತ್ತಿ ಮಾತನಾಡಿ, ಸರ್ವೆ ನಂ. 52 ಗುಂಟೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಸಿಬ್ಬಂದಿಗೆ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಈ ಭೂಮಿಯನ್ನು 31 ಮತ್ತು 34 ಮೀಸಲು ಅರಣ್ಯ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಇದೇ ಜಾಗದಲ್ಲಿ ಸರ್ವೆ ನಂ. 66 ಎಕರೆ ಜಮೀನು. 196 ಗೋಮಾಳ ಭೂಮಿ ಇರುವುದನ್ನು ಗುರುತಿಸಲಾಗಿದ್ದು, ಅದರಲ್ಲಿ ರೈತರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ‘ಬಗೈರ್ ಹುಕುಂ’ ಯೋಜನೆಯಡಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಜಂಟಿ ಸಮೀಕ್ಷೆಗೆ ತಹಶೀಲ್ದಾರ್ ಆರತಿ ಆದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

SCROLL FOR NEXT