ವಿಧಾನಸೌಧ 
ರಾಜ್ಯ

ಮಾದರಿ ನೀತಿ ಸಂಹಿತೆ ಜಾರಿಯಾದರೂ ಸಚಿವರ ಪಿ.ಎ, ಕಾರ್ಯದರ್ಶಿಗಳಿಂದ ಸರ್ಕಾರಿ ಸೌಲಭ್ಯಗಳ ಬಳಕೆ

ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ ಇದೇ 29ರ ಬುಧವಾರದಿಂದ ಜಾರಿಗೆ ಬಂದಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮ ವಾಹನಗಳನ್ನು ಹಿಂತಿರುಗಿಸಿ ತಮ್ಮ ಖಾಸಗಿ ವಾಹನಗಳನ್ನು ಬಳಸುತ್ತಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ ಇದೇ 29ರ ಬುಧವಾರದಿಂದ ಜಾರಿಗೆ ಬಂದಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮ ವಾಹನಗಳನ್ನು ಹಿಂತಿರುಗಿಸಿ ತಮ್ಮ ಖಾಸಗಿ ವಾಹನಗಳನ್ನು ಬಳಸುತ್ತಿದ್ದಾರೆ.

ಸರ್ಕಾರಿ ಅತಿಥಿ ಗೃಹ ಬಳಸುತ್ತಿದ್ದವರು ಸ್ಥಳಾಂತರಗೊಂಡಿದ್ದು, ಇನ್ನೂ ಹಲವು ಸಚಿವರ ಜತೆ ಅವರ ಸಹಾಯಕರು,  ಪಿ ಎಗಳು ಇನ್ನೂ ಶಿಫ್ಟ್ ಆಗಿಲ್ಲ. ಪರ್ಸನಲ್ ಸೆಕ್ರೆಟರಿಗಳು ಹಾಗೂ, ವಿವಿಧ ಸಚಿವರಿಗೆ ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿಗಳು ಈ ಅಧಿಕೃತ ವಾಹನಗಳನ್ನು ಬಳಸುತ್ತಿದ್ದಾರೆ. ಈ ವಾಹನಗಳು ನೇರವಾಗಿ ಇಲಾಖೆಗಳಿಂದ ಅಲ್ಲ, ಮಂಡಳಿಗಳು ಮತ್ತು ನಿಗಮಗಳಿಂದ ಬಂದಿದ್ದರಿಂದ ಅವರು  ಇನ್ನೂ ಬಳಕೆ ಮಾಡುತ್ತಿದ್ದಾರೆ  ಎಂದು ಮೂಲಗಳು ತಿಳಿಸಿವೆ.

ಅವರು ಅಂತಹ ವಾಹನಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ತಿಳಿಸುತ್ತೇನೆ ಎಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ  ಹೇಳಿದ್ದಾರೆ.

ಕೆಲವು ಸಚಿವರೊಂದಿಗೆ ಕೆಲಸ ಮಾಡುವ ಖಾಸಗಿ ಸಹಾಯಕರು ಬುಧವಾರ, ಗುರುವಾರ ಮತ್ತು ಶುಕ್ರವಾರದವರೆಗೆ ಮಂಡಳಿಗಳು ಮತ್ತು ನಿಗಮಗಳ ವಾಹನಗಳನ್ನು ಬಳಸುತ್ತಿದ್ದಾರೆ  ಇದು ಸರ್ಕಾರಿ ಯಂತ್ರದ ದುರುಪಯೋಗಕ್ಕೆ ಕಾರಣವಾಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಾಹನಗಳ ದುರ್ಬಳಕೆಯಾಗದಂತೆ ಚುನಾವಣಾ ಆಯೋಗ ಮತ್ತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಮತ್ತು ಮಾದರಿ ನೀತಿ ಸಂಹಿತೆಯನ್ನು ಅಕ್ಷರಶಃ ಪಾಲಿಸಬೇಕು ಎಂದು ಹೇಳಿದ್ದಾರೆ.

ಅಧಿಕಾರಿಗಳು ಪರಿಶೀಲನೆ ನಡೆಸಿ ವಾಹನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್‌ ಹಿರಿಯ ಮುಖಂಡ ಎಚ್‌ಡಿ ಕುಮಾರಸ್ವಾಮಿ  ಹೇಳಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ದುರ್ಬಳಕೆ  ಆಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡಲೇ ನಿಲ್ಲಿಸಬೇಕು. ಈ ವಿಷಯಗಳು ಮಾಧ್ಯಮಗಳಲ್ಲಿ ಬಹಿರಂಗವಾಗಬೇಕು ಹಾಗೂ ಈ ದುರ್ಬಳಕೆಯನ್ನು ನ್ನು ತಡೆಯಬೇಕು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಎ.ರವೀಂದ್ರ ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT