ರಾಜ್ಯ

ಜಾನುವಾರು ವ್ಯಾಪಾರಿ ಹತ್ಯೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ?

Srinivasamurthy VN

ರಾಮನಗರ: ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ನಿನ್ನೆ ರಾಮನಗರ ಜಿಲ್ಲೆಯ ಸಾತನೂರಿನಲ್ಲಿ 38 ವರ್ಷದ ದನದ ವ್ಯಾಪಾರಿ ಇದ್ರೀಸ್ ಪಾಷಾ ಎಂಬುವವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪುನೀತ್ ಕೆರೆಹಳ್ಳಿ ಮತ್ತು ಅವರ ಸಹವರ್ತಿಗಳು ಇದೇ ಸ್ಥಳದಲ್ಲಿ ಜಾನುವಾರುಗಳ ರಕ್ಷಣೆ ಮಾಡಿದ್ದರು.  

ನಿನ್ನೆ ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನ ರಕ್ಷಿಸಲಾಗಿದೆ ಎಂದು ಹೇಳಲಾಗಿದೆ. ಇದೀಗ ಇದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಪತ್ತೆಯಾಗಿದ್ದು, ಇದೇ ಪ್ರಕರಣದಲ್ಲಿ ಇದೀಗ ರಾಮನಗರ ಪೊಲೀಸರು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪದಲ್ಲಿ ಇದ್ರಿಸ್ ಪಾಶಾ ಎಂವುವವರ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇದ್ರೀಸ್ ಕುಟುಂಬಸ್ಥರು ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು (Complaint) ದಾಖಲಿಸಿದ್ದರು.

ದೂರು ದಾಖಲಿಸಿಕೊಂಡಿರುವ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಸದ್ಯ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ರಹಸ್ಯ ಸ್ಥಳದಲ್ಲಿರಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಕೊಲೆ ಆರೋಪ ಹಿನ್ನೆಲೆ ಮೃತನ ಸಂಬಂಧಿಕರು ಸಾತನೂರು ಠಾಣೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ಮಾಹಿತಿ ನೀಡಿರುವ ರಾಮನಗರ ಪೊಲೀಸರು, ಪುನೀತ್ ಕೆರೆಹಳ್ಳಿ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

SCROLL FOR NEXT