ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆ

ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. 

ಬೆಂಗಳೂರು: ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. 

ಹೌದು.. ಟೋಲ್ ದರ ದುಬಾರಿ ಎಂದು ಪ್ರಯಾಣಿಕರು ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. ಎಲ್ಲಾ ರೀತಿಯ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಮುಂದಾಗಿರುವ ಪ್ರಾಧಿಕಾರ ಟೋಲ್ ಸಂಗ್ರಹ ದಂಡ ಸಂಗ್ರಹಕ್ಕೆ ಆಟೊಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಶನ್ ತಂತ್ರಜ್ಞಾನ ಬಳಸಿಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಈ ಮಾದರಿಯನ್ನು ನವದೆಹಲಿ -ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ಬಳಸುತ್ತಿದೆ. ಕ್ರಮೇಣ ಇತರ ಎಕ್ಸ್‌ಪ್ರೆಸ್‌ವೇಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಸ್ತರಿಸಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲೂ ಈ ತಂತ್ರಜ್ಞಾನ ಅಳವಡಿಕೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಈ ತಂತ್ರಜ್ಞಾನದ ಅಡಿಯಲ್ಲಿ ಟೋಲ್ ಶುಲ್ಕವು ಫಾಸ್ಟ್ ಟ್ಯಾಗ್ ಮೂಲಕ ಕಡಿತವಾಗಲಿದೆ. ವಾಹನದ ಪ್ರವೇಶ ಮತ್ತು ನಿರ್ಗಮನದ ವೇಳೆ ಎಎನ್‌ಪಿಆರ್ ಕ್ಯಾಮೆರಾಗಳು ಬಳಕೆಯಾಗಲಿವೆ. ಎನ್‌ಎಚ್‌ಎಐ ಹೆದ್ದಾರಿಗಳ 89 ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ಯೋಜಿಸಿದೆ ಎಂದು ಹೇಳಲಾಗುತ್ತದೆ.

ಬೆಂಗಳೂರು-ನಿಡಘಟ್ಟ ಎಕ್ಸ್‌ವೇ ಸೆಕ್ಷನ್‌ನಲ್ಲಿ ಎರಡು ಟೋಲ್ ಪ್ಲಾಜಾಗಳು ಇವೆ. ನಿಡಘಟ್ಟ-ಮೈಸೂರು ಸೆಕ್ಷನ್‌ನಲ್ಲಿ ಇನ್ನೆರಡು ಟೋಲ್ ಪ್ಲಾಜಾಗಳನ್ನು ಎನ್‌ಎಚ್‌ಎಐ ಅಳವಡಿಸಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನೂ, ಬಿಡದಿ, ಚನ್ನಪಟ್ಟಣ ಮತ್ತು ರಾಮನಗರಕ್ಕೆ ತೆರಳುವವರಿಗೆ ಉಂಟಾಗುವ ಅನಾನುಕೂಲದ ಬಗ್ಗೆ ಪ್ರತಿಕ್ರಿಯಿಸಿರುವ ಎನ್‌ಎಚ್‌ಎಐ ಅಧಿಕಾರಿಗಳು, ಎಕ್ಸ್‌ಪ್ರೆಸ್ ವೇಯ ಇಕ್ಕೆಲಗಳಲ್ಲೂ ಎರಡು ಲೇನ್‌ಗಳ ಸರ್ವೀಸ್ ರಸ್ತೆ ಇದ್ದು, ಅದರಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಉಲ್ಲೇಖಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT