ಫುಡ್ ಕಿಟ್ ಹಂಚಿಕೆ ಆರೋಪ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್‍ಐಆರ್ ದಾಖಲು
ಜನರಿಗೆ ಫುಡ್ ಕಿಟ್ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಬೆಂಗಳೂರು: ಜನರಿಗೆ ಫುಡ್ ಕಿಟ್ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೆಸರಿನಲ್ಲಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಫುಡ್ ಕಿಟ್ ಹಂಚಿಕೆ ಆರೋಪ ಕೇಳಿ ಬಂದಿದ್ದು, ಕಿಟ್ ಹಂಚಿಕೆ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ದಾಳಿ ಮಾಡಿದ್ದು, ಈ ವೇಳೆ 7 ಲಕ್ಷಕ್ಕೂ ಅಧಿಕ ಮೌಲ್ಯದ ಫುಡ್ ಕಿಟ್ಗಳನ್ನು ಜಪ್ತಿ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.