ಪ್ರಜಾಧ್ವನಿ ಯಾತ್ರೆಯಲ್ಲಿ ಜನರತ್ತ ಹಣ ಎಸೆದ ಡಿ ಕೆ ಶಿವಕುಮಾರ್ 
ರಾಜ್ಯ

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರತ್ತ ಹಣ ಎಸೆದ ಡಿ ಕೆ ಶಿವಕುಮಾರ್: ಮಂಡ್ಯದಲ್ಲಿ ಪೊಲೀಸರಿಂದ ಎಫ್ಐಆರ್ ದಾಖಲು

ಮಂಡ್ಯದಲ್ಲಿ ಇತ್ತೀಚೆಗೆ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ಬಸ್ಸಿನಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಹೋಗುತ್ತಿದ್ದ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ 500ರ ನೋಟುಗಳನ್ನು ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಈಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೇವಿನಹಳ್ಳಿಯಲ್ಲಿ ನಡೆದ ರ್ಯಾಲಿಯಲ್ಲಿ ಬಸ್ಸಿನ ಮೇಲಿನಿಂದ ನೋಟಿನ ಕಂತೆಯನ್ನು ಎಸೆದಿದ್ದಕ್ಕಾಗಿ ಸೆಕ್ಷನ್ 171ಇ ಅಡಿಯಲ್ಲಿ ಪೊಲೀಸರು ಲಂಚ ನೀಡಿದ ಆರೋಪದ ಮೇಲೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!