ಡಿ.ಕೆ ಶಿವಕುಮಾರ್ 
ರಾಜ್ಯ

ಮೀಸಲಾತಿ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗೆ ನಾನು ಕಾರಣವಲ್ಲ; ಮುಖ್ಯಮಂತ್ರಿಗಳ ಸ್ವಯಂಕೃತ ಅಪರಾಧ: ಡಿ.ಕೆ ಶಿವಕುಮಾರ್

ಮೀಸಲಾತಿ ವಿಚಾರದಲ್ಲಿ ಸಮುದಾಯಗಳು ಪರಸ್ಪರ ಜಗಳವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದರು.

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಸಮುದಾಯಗಳು ಪರಸ್ಪರ ಜಗಳವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದರು.

ರಾಜ್ಯಾದ್ಯಂತ ಕೋಟಾ ವಿಚಾರವಾಗಿ ವಿವಿಧ ಸಮುದಾಯಗಳು ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬೊಮ್ಮಾಯಿ ಆರೋಪಕ್ಕೆ ಉತ್ತರಿಸಿದರು. ನಾವು ಯಾವುದೇ ಗಲಭೆಗಳಿಗೆ ಕಾರಣವಲ್ಲ. ಇದೆಲ್ಲ ಮುಖ್ಯಮಂತ್ರಿ ಸ್ವಯಂಕೃತ ಅಪರಾಧ ಎಂದು ತಿರುಗೇಟು ನೀಡಿದ್ದಾರೆ.

ಮುಸ್ಲಿಮರ ಕೋಟಾವನ್ನು ರದ್ದುಪಡಿಸಿ ಒಕ್ಕಲಿಗರು ಮತ್ತು ಲಿಂಗಾಯತರು ತಮಗೆ ನೀಡುವಂತೆ ಸರ್ಕಾರವನ್ನು ಕೇಳಿದ್ದಾರೆಯೇ? ಸಮುದಾಯಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಕೋಟಾವನ್ನು ಹೆಚ್ಚಿಸುವಂತೆ ಕೇಳಿಕೊಂಡಿವೆ. ಬಿಜೆಪಿ ಸರ್ಕಾರವು ಚುನಾವಣೆಗೆ ಮುಂಚಿತವಾಗಿ ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಕನಕಪುರ ಶಾಸಕ ಡಿಕೆಶಿ ಆರೋಪಿಸಿದರು.

ಸರ್ಕಾರವು ಸಂವಿಧಾನಕ್ಕೆ ಬದ್ಧವಾಗಿದೆ ಮತ್ತು ಎಲ್ಲಾ ವರ್ಗಗಳನ್ನು ರಕ್ಷಿಸುತ್ತದೆ ಎಂದು ಪ್ರಮಾಣ ಮಾಡಿದೆ . ಆದರೆ ಈಗ ಅದು ಒಂದು ವರ್ಗದ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲರ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದರು. ಅಲ್ಪಸಂಖ್ಯಾತರನ್ನು ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯುಎಸ್) ಕೋಟಾದಡಿ ಸೇರಿಸುವ ಮೂಲಕ ರಾಜ್ಯ ಸರ್ಕಾರ ಬ್ರಾಹ್ಮಣರು ಮತ್ತು ಜೈನರಿಗೂ ಅನ್ಯಾಯ ಮಾಡಿದೆ ಎಂದು ಅವರು ಹೇಳಿದರು.

ಇದೇ ವೇಳೆ ಕುಂಚಟಿಗ ಒಕ್ಕಲಿಗ ಸಮುದಾಯದ ಧಾರ್ಮಿಕ ಮುಖ್ಯಸ್ಥ ಶ್ರೀ ನಂಜಾವದೂತ ಸ್ವಾಮೀಜಿ ಮಾತನಾಡಿ, ಕೋಟಾ ಹೆಚ್ಚಳವು ಅಸಮರ್ಪಕವಾಗಿದೆ ಮತ್ತು ನಾವು ಇನ್ನೊಂದು ಸಮುದಾಯಕ್ಕೆ ಮೀಸಲಾದ ಕೋಟಾವನ್ನು ಕಿತ್ತುಕೊಳ್ಳುತ್ತಿದ್ದೇವೆ ಎಂಬ ಆರೋಪ ಕೇಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT