ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ 
ರಾಜ್ಯ

ಏಪ್ರಿಲ್ 9 ರಂದು ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ಸಫಾರಿ, ಹೋಂ ಸ್ಟೇ, ರೆಸಾರ್ಟ್ ಬಂದ್

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆ ದೃಷ್ಟಿಯಿಂದ ನಾಳೆಯಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್...

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆ ದೃಷ್ಟಿಯಿಂದ ನಾಳೆಯಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಗುರುವಾರದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿದ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗೂ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಬಂಡೀಪುರವನ್ನು ತಲುಪುವ ಮಾರ್ಗದ ದುರಸ್ತಿ ಕಾರ್ಯ ನಡೆದಿದೆ. ಅಲ್ಲದೆ ಮೇಲುಕಮನಹಳ್ಳಿಯಲ್ಲಿಯೂ(ಸಫಾರಿ ಪಾಯಿಂಟ್) ರಸ್ತೆಗಳನ್ನು ದುರಸ್ತಿ ಮಾಡಿಸಿ, ಸಫಾರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯು ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್