ಚುನಾವಣಾ ಆಯೋಗದ ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಚಾರದಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳಿಗೆ ಪಾವತಿಸಿದ ಶುಲ್ಕದ ವಿವರಗಳನ್ನು ಐಟಿ ಇಲಾಖೆಯೊಂದಿಗೆ ಹಂಚಿಕೊಳ್ಳಿ: ಕೆಆರ್‌ಎಸ್ ಪಾರ್ಟಿ

ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ಈ ಬಾರಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ತಾರೆಯರ ವಿವರಗಳನ್ನು ಸಂಗ್ರಹಿಸಿ ಅವರಿಗೆ ನೀಡುವ ಸಂಭಾವನೆಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಚುನಾವಣಾ ವೆಚ್ಚದ ಅಡಿಯಲ್ಲಿ ತರುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ಈ ಬಾರಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ತಾರೆಯರ ವಿವರಗಳನ್ನು ಸಂಗ್ರಹಿಸಿ ಅವರಿಗೆ ನೀಡುವ ಸಂಭಾವನೆಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಚುನಾವಣಾ ವೆಚ್ಚದ ಅಡಿಯಲ್ಲಿ ತರುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದೆ.

ಪಕ್ಷದ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ನಿನ್ನೆ ಮಂಗಳವಾರ ಮನವಿ ಸಲ್ಲಿಸಿ, ‘ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಕರೆತರುವ ಪರಿಪಾಠ ಚಾಲ್ತಿಯಲ್ಲಿದೆ. ''ಅಭ್ಯರ್ಥಿ ಮತ್ತು ಪಕ್ಷದೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೂ ಸೆಲೆಬ್ರಿಟಿಗಳು ಮತ್ತು ಸಿನಿಮಾ ತಾರೆಯರು ಪ್ರಭಾವ ಮತ್ತು ಹಣದಿಂದ ಅಭ್ಯರ್ಥಿಗಳ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಇದು ಮತದಾರರ ನಂಬಿಕೆ,  ಚುನಾವಣಾ ಪ್ರಕ್ರಿಯೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಕನ್ನಡ ನಟರಷ್ಟೇ ಅಲ್ಲ, ಕರ್ನಾಟಕ ರಾಜಕೀಯದಲ್ಲಿ ಆಸಕ್ತಿ ಇಲ್ಲದ ತೆಲುಗು ಚಿತ್ರರಂಗದ ತಾರೆಯರನ್ನು ಕೂಡ ಆಂಧ್ರಪ್ರದೇಶ ಮತ್ತು ತೆಲಂಗಾಣದ ಗಡಿ ಪ್ರದೇಶಗಳಲ್ಲಿ ಪ್ರಚಾರಕ್ಕೆ ಕರೆಸಲಾಗುತ್ತದೆ ಎಂದು ಆರೋಪಿಸಿದ್ದಾರೆ. 

ಈ ತಾರೆಯರಿಗೆ ಕಪ್ಪುಹಣ ನೀಡಲಾಗುತ್ತಿದ್ದು, ಅದು ಲೆಕ್ಕಕ್ಕೆ ಬಾರದೆ ಇರುವುದರಿಂದ ಚುನಾವಣಾ ಆಯೋಗವು ಅಂತಹ ತಾರೆಯರ ವಿವರಗಳನ್ನು ಸಂಗ್ರಹಿಸಿ, ಪ್ರಚಾರಕ್ಕೆ ಕರೆತಂದ ಅಭ್ಯರ್ಥಿಯ ಚುನಾವಣಾ ವೆಚ್ಚವಾಗಿ ಅವರಿಗೆ ನೀಡುವ ಸಂಭಾವನೆಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ. ನಟರು ಅಂತಹ ಆದಾಯವನ್ನು ಬಹಿರಂಗಪಡಿಸುವುದಿಲ್ಲ, ಇದರಿಂದ ತೆರಿಗೆ ವಂಚನೆಯಾಗಲಿರುವುದರಿಂದ ಸಂಭಾವನೆಯ ವಿವರವನ್ನು ಆದಾಯ ತೆರಿಗೆ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ರಘು ಜಾಣಗೆರೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್